ಕೆಂಪೇಗೌಡ ಪ್ರತಿಮೆ 
ರಾಜ್ಯ

ಸದ್ಯದಲ್ಲಿಯೇ ಕೆಂಪೇಗೌಡ ಪ್ರತಿಮೆ ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಡಾ. ಸಿ ಎನ್ ಅಶ್ವಥ ನಾರಾಯಣ

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ವೀಕ್ಷಿಸಲು ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

 ಅವರು ನಿನ್ನೆ ಅಧಿಕಾರಿಗಳನ್ನು ಭೇಟಿ ಮಾಡಿ, ಪ್ರತಿಮೆ ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮತ್ತು ಪ್ರವಾಸಿಗರಿಗೆ ಪ್ರವೇಶವಿಲ್ಲ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ನಿಟ್ಟಿನಲ್ಲಿ ವಿಶೇಷ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕೆಂಪೇಗೌಡ ಥೀಮ್ ಪಾರ್ಕ್‌ನ ಅಭಿವೃದ್ಧಿಗೆ ಸಂಬಂಧಿಸಿದ ಕೆಲಸಗಳು ಇನ್ನೂ ನಡೆಯುತ್ತಿರುವುದರಿಂದ, ಪ್ರವಾಸಿಗರಿಗೆ ಐಒಸಿ ಇಂಧನ ನಿಲ್ದಾಣದ ಕಡೆಯಿಂದ ಪ್ರತಿಮೆಯನ್ನು ತಲುಪಲು ಅನುಕೂಲ ಕಲ್ಪಿಸಲು ನಿರ್ಧರಿಸಲಾಗಿದೆ. ಇಂಧನ ಕೇಂದ್ರದ ಹಿಂದೆ ಗರಿಷ್ಠ 80 ವಾಹನಗಳಿಗೆ ಸಾರ್ವಜನಿಕರಿಗೆ ಪಾರ್ಕಿಂಗ್ ಸೌಲಭ್ಯಗಳನ್ನು ಒದಗಿಸಲಾಗುವುದು, ಇದು ಒಂದು ವಾರದಲ್ಲಿ ಲಭ್ಯವಾಗಲಿದೆ ಎಂದರು. 

ಪ್ರತಿ ಸಂದರ್ಶಕರಿಗೆ 30 ನಿಮಿಷಗಳ ಕಾಲ ಸ್ಥಳದಲ್ಲಿ ಉಳಿಯಲು ಅವಕಾಶವಿದೆ. ಈ ಸಮಯದಲ್ಲಿ ಮಾಡಲಾಗುತ್ತಿರುವ ವ್ಯವಸ್ಥೆಗಳು ತಾತ್ಕಾಲಿಕವಾಗಿದ್ದು, ಥೀಮ್ ಪಾರ್ಕ್‌ನ ಕೆಲಸ ಪೂರ್ಣಗೊಂಡ ನಂತರ ಹೆಚ್ಚಿನ ಸೌಲಭ್ಯಗಳನ್ನು ಜಾರಿಗೆ ತರಲಾಗುವುದು ಎಂದರು, 
ಪ್ರತಿಮೆಗೆ ಭೇಟಿ ನೀಡುವವರಿಂದ ಯಾವುದೇ ಶುಲ್ಕವನ್ನು ಸಂಗ್ರಹಿಸಲಾಗುವುದಿಲ್ಲ. ರಾತ್ರಿ ಸಮಯದಲ್ಲಿ ಅದನ್ನು ಹೆಚ್ಚು ಆಕರ್ಷಕವಾಗಿಸಲು ಸ್ಥಳದಲ್ಲಿ ಬೆಳಕಿನ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ