ರಾಜ್ಯ

ದಾಖಲೆ ನಿರ್ಮಿಸಿದ ಕಾನೂನು ಪ್ರಾಧಿಕಾರ, ಸೌಹಾರ್ದಯುತವಾಗಿ 14.8 ಲಕ್ಷ ಕೇಸುಗಳು ಇತ್ಯರ್ಥ

Sumana Upadhyaya

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು (KSLSA) ರಾಜ್ಯಾದ್ಯಂತ ನಡೆಸಿದ ಲೋಕ ಅದಾಲತ್‌ನಲ್ಲಿ 14.72 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಇದರೊಂದಿಗೆ ಕೆಎಸ್‌ಎಲ್‌ಎಸ್‌ಎ ಹೊಸ ದಾಖಲೆ ನಿರ್ಮಿಸಿದ್ದು, ಒಂದೇ ದಿನದಲ್ಲಿ ಸೌಹಾರ್ದಯುತವಾಗಿ ಅತಿ ಹೆಚ್ಚು ಪ್ರಕರಣಗಳ ಇತ್ಯರ್ಥದಲ್ಲಿ ತನ್ನ ಹಿಂದಿನ ದಾಖಲೆಯನ್ನು ಮುರಿದಿದೆ.

ಈ ಬಗ್ಗೆ ಮಾಧ್ಯಮಗಳ ಮುಂದೆ ಮಾಹಿತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೆಎಸ್‌ಎಲ್‌ಎಸ್‌ಎ ಕಾರ್ಯಾಧ್ಯಕ್ಷ ನ್ಯಾಯಮೂರ್ತಿ ಬಿ.ವೀರಪ್ಪ, ಲೋಕ ಅದಾಲತ್‌ನಲ್ಲಿ 13,00,784 ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು 1,75,900 ಬಾಕಿ ಪ್ರಕರಣಗಳು ಸೇರಿದಂತೆ ಒಟ್ಟು 14,77,285 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಎಲ್ಲಾ ಪ್ರಕರಣಗಳಿಗೆ ಪರಿಹಾರವಾಗಿ 1,282 ಕೋಟಿ ರೂಪಾಯಿ ನೀಡಲಾಗಿದೆ ಎಂದರು.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ಮತ್ತು ರಿಯಲ್ ಎಸ್ಟೇಟ್ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಸಂಬಂಧಿಸಿದ ಒಟ್ಟು 175 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 11 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗಿದೆ. ಜತೆಗೆ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಬಾಕಿ ಉಳಿದಿರುವ 123 ಪ್ರಕರಣಗಳ ವಿಲೇವಾರಿಯೊಂದಿಗೆ 4 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದರು.

SCROLL FOR NEXT