ಬಸ್ ನಿಲ್ದಾಣ 
ರಾಜ್ಯ

ಮೈಸೂರಿನಲ್ಲಿ ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ವಾರದೊಳಗೆ ​ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್

ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

ಮೈಸೂರು: ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

ಈ ಬಸ್‌ ನಿಲ್ದಾಣವನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬಲ ಭಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಹಿಂದೆ ಅನೇಕ ಬಾರಿ ಕೆಲಸವನ್ನು ನಿಲ್ಲಿಸಿದ್ದರೂ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಒಂದು ವಾರದ ಒಳಗೆ ವಿವಾದಾತ್ಮಕ ನಿಲ್ದಾಣವನ್ನು ತೆರವುಗೊಳಿಸಬೇಕು ಎಂದು ನೋಟಿಸ್ ನಲ್ಲಿ ಹೇಳಿದೆ ಎಂದು ತಿಳಿದುಬಂದಿದೆ.

ಸದ್ಯ ಈ ವಿಚಾರ ಕೋಮು ಸಮಸ್ಯೆಯಾಗಿ ಪರಿವರ್ತನೆಗೊಂಡಿದೆ. 1 ವಾರದೊಳಗೆ ವಿವಾದಾತ್ಮಕ ಬಸ್ ನಿಲ್ದಾಣ ತೆರವುಗೊಳಿಸಬೇಕು. ಇಲ್ಲದಿದ್ದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯ್ದೆಯಡಿ 2003ರ ಅನ್ವಯ ಕ್ರಮ ಕೈಗೊಳ್ಳಲಾಗುವುದು ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ನೋಟೀಸ್ ನೀಡಿದ್ದಾರೆ.

ಬಸ್‌ ಶೆಲ್ಟರ್‌ನ ಗೋಪುರ ಗುಂಬಜ್‌ ಮಾದರಿಯಲ್ಲಿದೆ. ಇದು ಇಸ್ಲಾಮ್‌ ಸಂಸ್ಕೃತಿಯ ಹೇರಿಕೆ. ಇದನ್ನು ಎರಡು ದಿನಗಳಲ್ಲಿ ತೆರವು ಮಾಡದಿದ್ದರೆ ತಾನೇ ಜೆಸಿಬಿ ತಂದು ಒಡೆದು ಹಾಕುವುದಾಗಿ ಮೈಸೂರು ಸಂಸದ ಪ್ರತಾಪ್‌ಸಿಂಹ ಅವರು ಈ ಹಿಂದೆ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video