ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೆಂಗಳೂರು ಟೆಕ್ ಸಮ್ಮಿಟ್‍ನ 25ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ. 
ರಾಜ್ಯ

ನವೋದ್ಯಮ ಪಾರ್ಕ್, 6 ತಿಂಗಳಲ್ಲಿ 6 ಹೈಟೆಕ್ ನಗರಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದು!

ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಮುಂದಿನ ಆರು ತಿಂಗಳಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಪ್ರಕಟಿಸಿದರು.

ಬೆಂಗಳೂರು: ಸ್ಟಾರ್ಟಪ್ ಪರಿಸರ ವ್ಯವಸ್ಥೆಗೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಮುಂದಿನ ಆರು ತಿಂಗಳಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಪ್ರಕಟಿಸಿದರು.

ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಬೆಂಗಳೂರು ತಂತ್ರಜ್ಞಾನ ಶೃಂಗ (ಬೆಂಗಳೂರು ಟೆಕ್ ಸಮ್ಮಿಟ್) ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಆರು ತಿಂಗಳೊಳಗೆ ನವೋದ್ಯಮ ಪಾರ್ಕ್ ಸ್ಥಾಪನೆಗೆ ಚಾಲನೆ ನೀಡಲಾಗುವುದು. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೃಷಿ ಸಂಬಂಧಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳ‌ ನವೋದ್ಯಮಗಳಿಗೂ ಈ ಪಾರ್ಕ್ ನಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಆಚೆಗೆ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ‌ಮಾಡುತ್ತಿದೆ. ಇದಕ್ಕಾಗಿಯೇ ಆರು ಹೊಸ ನಗರಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಬೆಂಗಳೂರು ಸಮೀಪದ ಒಂದು ಸ್ಥಳವನ್ನು ಜ್ಞಾನ ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಪರಿಸರ ಸ್ನೇಹಿ ಸಂಶೋಧನೆ, ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ಹೆಚ್ಷಿನ ಉತ್ತೇಜನ ನೀಡಬೇಕಿದೆ. ಪರಿಸರವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವ ಧ್ಯೇಯ ಎಲ್ಲ ಆವಿಷ್ಕಾರಗಳ ಹಿಂದೆ ಇರಬೇಕು ಎಂದರು.

ಇದೇ ವೇಳೆ ಹುಬ್ಬಳ್ಳಿ, ಧಾರವಾಡ, ಮೈಸೂರು, ಮಧ್ಯ ಕರ್ನಾಟಕ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆರು ತಿಂಗಳ ಅವಧಿಯಲ್ಲಿ ಆರು ಹೊಸ ಹೈಟೆಕ್ ನಗರಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.

ಈ ನಗರಗಳು ರಾಜ್ಯದ ಅಭಿವೃದ್ಧಿಗೆ ಜ್ಞಾನ, ತಂತ್ರಜ್ಞಾನ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುತ್ತವೆ. ಈ ನಿಟ್ಟಿನಲ್ಲಿ ನಾವು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ, ಭೂಗೋಳವು ಕುಗ್ಗುತ್ತಿದೆ, ಸಂಪನ್ಮೂಲಗಳು ಕ್ಷೀಣಿಸುತ್ತಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯನ್ನು ಬಿಡುಗಡೆ ಮಾಡಿದರು.

ಐಟಿ/ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಇಎಸ್‌ಡಿಎಂ ಪರಿಸರ ವ್ಯವಸ್ಥೆಯಲ್ಲಿ ವೈವಿಧ್ಯಮಯ ಉತ್ಪನ್ನದಲ್ಲಿ ಹೆಸರು ಮಾಡಿರುವ ಕಂಪನಿಗಳು ಸುಮಾರು 36,804 ಕೋಟಿ ಮೊತ್ತದ ಹೂಡಿಕೆಯೊಂದಿಗೆ ಕರ್ನಾಟಕದಲ್ಲಿ ತಮ್ಮ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಉತ್ಸುಕವಾಗಿವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ನಾಯಕತ್ವ ಬದಲಾವಣೆ ಚರ್ಚೆ ನಡುವೆ ಕೌತುಕ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್ ಮಾತುಕತೆ! Video

IPL 2026: ರಾಹುಲ್ ಭರ್ಜರಿ ಬ್ಯಾಟಿಂಗ್; ರಾಜಸ್ಥಾನ ವಿರುದ್ಧ ಡೆಲ್ಲಿ 7 ವಿಕೆಟ್ ಗೆಲುವು!

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!

ಕದನ ವಿರಾಮ ಇದ್ದರೂ, ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ನಾಲ್ವರು ಸಾವು!

SCROLL FOR NEXT