ಪ್ರಾತಿನಿಧಿಕ ಚಿತ್ರ 
ರಾಜ್ಯ

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ದಾವಣಗೆರೆಯಲ್ಲಿ ಕಸ ಎಸೆದ 8 ಮಂದಿಗೆ ದಂಡ ವಿಧಿಸಿದ ಅಧಿಕಾರಿಗಳು

ನಗರದ ರೇಣುಕಾ ಮಂದಿರದ ಬಳಿಯಲ್ಲಿ ಕಸ ಎಸೆಯುವ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ನಂತರ ದಾವಣಗೆರೆ ಸಿಟಿ ಕಾರ್ಪೊರೇಷನ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ನಗರದಲ್ಲಿ ಕಸ ಎಸೆಯುವವರ ಮೇಲೆ ಕಣ್ಣಿಟ್ಟಿದ್ದು, ದಂಡ ವಿಧಿಸುತ್ತಿದ್ದಾರೆ.

ದಾವಣಗೆರೆ: ನಗರದ ರೇಣುಕಾ ಮಂದಿರದ ಬಳಿಯಲ್ಲಿ ಕಸ ಎಸೆಯುವ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ನಂತರ ದಾವಣಗೆರೆ ಸಿಟಿ ಕಾರ್ಪೊರೇಷನ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ನಗರದಲ್ಲಿ ಕಸ ಎಸೆಯುವವರ ಮೇಲೆ ಕಣ್ಣಿಟ್ಟಿದ್ದು, ಪಾಲಿಕೆಯ ಮಾರ್ಷಲ್‌ಗಳು ಒಂದೇ ಸ್ಥಳದಲ್ಲಿ ಕಸೆ ಎಸೆಯುತ್ತಿದ್ದ ಎಂಟು ಜನರನ್ನು ಹಿಡಿದು ಅವರಿಂದ 2,700 ರೂ. ದಂಡ ವಸೂಲಿ ಮಾಡಿದ್ದಾರೆ.

ನಿಯಮ ಉಲ್ಲಂಘಿಸಿದವರನ್ನು ಆರೋಗ್ಯ ನಿರೀಕ್ಷಕ ನಿಖಿಲ್ ನೇತೃತ್ವದ ಮಾರ್ಷಲ್‌ಗಳ ತಂಡವು ಹಿಡಿದಿದೆ. ತಂಡವು ಅವರನ್ನು ತಾವೇ ಎಸೆದಿದ್ದ ಕಸವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಲ್ಲದೆ, ದಂಡ ಪಾವತಿಸುವಂತೆಯೂ ಮಾಡಿದೆ. ಇವರನ್ನು ಪೂರ್ವ ಮತ್ತು ಈಶಾನ್ಯ ಭಾರತದಿಂದ ಬಂದವರು ಎನ್ನಲಾಗಿದೆ.

ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಲು ಪಾಲಿಕೆ ಜನರಿಗೆ ಅರಿವೂ ಮೂಡಿಸಿದ್ದರೂ, ಹಲವರು ಅದನ್ನು ಮಾಡುತ್ತಿಲ್ಲ. ಆದರೆ, ಪೌರಕಾರ್ಮಿಕರು ಸೋಮವಾರದಿಂದ ಪ್ರತ್ಯೇಕಿಸಿದ ಕಸವನ್ನು ಸಂಗ್ರಹಿಸುತ್ತಿದ್ದಾರೆ ಎಂದು ನಿಖಿಲ್ ಹೇಳಿದರು.

ಜನರು ರಸ್ತೆ ಹಾಗೂ ಖಾಲಿ ನಿವೇಶನಗಳಲ್ಲಿ ಕಸ ಎಸೆಯುವುದನ್ನು ತಡೆಯಲೆಂದೇ ಆರೋಗ್ಯ ಇಲಾಖೆಯು ತಂಡಗಳನ್ನು ರಚಿಸಿದೆ. ಈ ತಂಡಗಳು ಕಸ ಎಸೆಯುವವರನ್ನು ತಡೆಯುತ್ತವೆ ಎಂದು ಹೇಳಿದರು.

ನಗರದಲ್ಲಿ ಕಸ ಎಸೆಯುವುದನ್ನು ತಡೆಯಲು ಮುಂದಾಗಿದ್ದ ಸಮಾಜಸೇವಕ ಎಂ.ಜಿ. ಶ್ರೀಕಾಂತ್ ಮಾತನಾಡಿ, ಈಗ ತ್ಯಾಜ್ಯವನ್ನು ಪ್ರತ್ಯೇಕಿಸಿ ಅಲ್ಲಿನ ನಿವಾಸಿಗಳು ಪೌರಕಾರ್ಮಿಕರಿಗೆ ನೀಡಲಾರಂಭಿಸಿದ್ದಾರೆ ಎನ್ನುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!