ರಾಜ್ಯ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ: ಚಿಲುಮೆ ಎನ್ ಜಿಒಗೆ ನೀಡಿದ್ದ ಅನುಮತಿ ರದ್ದು; ಪ್ರಕರಣ ದಾಖಲು

Nagaraja AB

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅನ್ ಲೈನ್ ಅಥವಾ VHA(Voter Helpline App) ಮುಖೇನಾ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಆದರೆ, ಸದರಿ ಸಂಸ್ಥೆಯು ಪತ್ರದಲ್ಲಿ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿರುವ ದೂರಿನ ಹಿನ್ನೆಲೆಯಲ್ಲಿ ಅನುಮತಿಯನ್ನು ರದ್ದುಪಡಿಸಲಾದೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2023ರ ಕಾರ್ಯಚಟುವಟಿಕೆಗಳ ಕುರಿತು, ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ.ಎಲ್.ಓ, ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಸಹಯೋಗದೊಂದಿಗೆ ಸಮನ್ವಯ ಸಾಧಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅನ್ ಲೈನ್/VHA (Voter Helpline App) ಮುಖೇನಾ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ರವರಿಗೆ ಅನುಮತಿಯನ್ನು ನೀಡಲಾಗಿತ್ತು. 

ಆದರೆ, ಮಹದೇವಪುರ ವಲಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳಂತೆ (ಬಿಎಲ್ ಒ)  ಮತದಾರರ ವಿವರಗಳನ್ನು ಸಂಗ್ರಹಿಸಿದ್ದಕ್ಕಾಗಿ ಒಬ್ಬ ಪ್ರತಿನಿಧಿಯ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು, ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಅವರು ಅನುಮತಿಯನ್ನು ರದ್ದುಗೊಳಿಸಿದ್ದಾರೆ.

ಮತದಾರರ ವಿವರಗಳನ್ನು ಹುಡುಕುವಾಗ ಪ್ರತಿನಿಧಿಗಳು ಬೂತ್ ಮಟ್ಟದ ಅಧಿಕಾರಿಗಳಂತೆ ಮತದಾರರ ವಿವರ ಸಂಗ್ರಹಿಸಿದ್ದಾರೆ. ಈ ವಿಷಯ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ತಲುಪುತ್ತಿದ್ದಂತೆ ವರದಿ ನೀಡುವಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿದ್ದಾರೆ ಮತ್ತು ಅದನ್ನು ಮುಖ್ಯ ಚುನಾವಣಾಧಿಕಾರಿ (ಸಿಇಒ) ಅವರಿಗೆ ಕಳುಹಿಸಲಾಗುತ್ತದೆ. ಸಂಸ್ಥೆಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಚಟುವಟಿಕೆಯಲ್ಲಿ (Systematic Voters' Education and Electoral Participation- SVEEP) ತೊಡಗದಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಹೇಳಿರುವುದಾಗಿ ವರದಿಯಾಗಿದೆ. 

ಅನುಮತಿ ಪತ್ರದಲ್ಲಿ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿರುವುದರಿಂದ ಸದರಿ ಸಂಸ್ಥೆಗೆ ನೀಡಲಾಗಿದ್ದ ಅನುಮತಿಯನ್ನು ರದ್ದುಪಡಿಸಲಾಗಿದೆ. ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಪ್ರತಿನಿಧಿಗಳಿಗೆ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಬಾರದಾಗಿ ಈ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

SCROLL FOR NEXT