ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ- ಸಿಎಂ ಬೊಮ್ಮಾಯಿ

ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳ ನಿರೀಕ್ಷೆಯಿದ್ದು,  ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಮಂಗಳೂರು: ಬಂಡವಾಳ ಹೂಡಿಕೆದಾರರ ಸಮಾವೇಶದಿಂದ  ನವೀಕರಿಸಬಹುದಾದ ಇಂಧನ,  ಹೈಡ್ರೋಜನ್ ಇಂಧನ ಮತ್ತು ಕಡಲನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಂದೂವರೆಯಿಂದ ಎರಡು ಲಕ್ಷ ಕೋಟಿ ಬಂಡವಾಳ ನಿರೀಕ್ಷೆಯಿದ್ದು,  ಕರಾವಳಿಯಲ್ಲಿ ದೊಡ್ಡ ಪ್ರಮಾಣದ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ತಯಾರಿ ನಡೆಸಲಾಗಿದೆ. ಈಗಾಗಲೇ ಮೂರು ನವೀಕರಿಸಬಹುದಾದ ಇಂಧನ ಕಂಪೆನಿಗಳೊಂದಿಗೆ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿಯಲ್ಲಿ  ಅನುಮೋದನೆ ನೀಡಲಾಗಿದೆ. ಬಹಳ ವೇಗದಲ್ಲಿ ಕೆಲಸಗಳಾಗುತ್ತಿದ್ದು, ಮಾರ್ಚ್ ಏಪ್ರಿಲ್ ವೇಳೆಗೆ ಕೆಲಸ ಪ್ರಾರಂಭ ಮಾಡುವುದಾಗಿ 2-3 ಕಂಪನಿಗಳು ಹೇಳಿವೆ ಎಂದರು. 

ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರಾವಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಖ್ಯ ಪಾತ್ರ ವಹಿಸಿದೆ. ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಯ ಎರಡು ಪ್ರಮುಖ ಯೋಜನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಬರಲಿದ್ದು,  ಗಲ್ಫ್ ದೇಶ  ಮತ್ತು ಮಂಗಳೂರಿನಲ್ಲಿ  ತಲೆ ಎತ್ತಲಿದೆ.  ಮಂಗಳೂರಿನ ಆಸುಪಾಸಿನಲ್ಲಿ ಕಡಲ ನೀರಿನಿಂದ ಅಮೋನಿಯಾ ತಯಾರು ಮಾಡುವ ಪ್ರಮುಖ ಘಟಕ ಬರಲಿದೆ. ನವೀಕರಿಸಬಹುದಾದ ಇಂಧನ ಘಟಕಕ್ಕೆ ಅಗತ್ಯ ವಿರುವ ಇಂಧವನ್ನೂ ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರಶಕ್ತಿ ಮತ್ತು ಪವನ ಶಕ್ತಿಯಿಂದ ಪಡೆಯಲಾಗುವುದು. ಇದು ಸಂಪೂರ್ಣವಾಗಿ ಹಸಿರು ಯೋಜನೆಯಾಗಲಿದೆ ಎಂದರು. 

ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ  ದುರಸ್ತಿ ಕಾಮಗಾರಿ  ನಿರಂತರವಾಗಿ ಮಳೆ ಬಂದಿದ್ದರಿಂದ  ತಡವಾಗಿದೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು,  ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಬೇಕಿದೆ. ಈ ವಾರದಲ್ಲಿ ಅದಕ್ಕೆ ಪೂರಕವಾಗಿ ಇಡೀ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಸಭೆ ಕರೆಯಲಾಗುವುದು ಎಂದು ಅವರು ಹೇಳಿದರು. 

ಆದ್ಯತೆ ಮೇರೆಗೆ ಮಂಗಳೂರು- ಬೆಂಗಳೂರು ಹೆದ್ದಾರಿ ದುರಸ್ತಿ ಕೆಲಸಗಳಾದ ಸುರಂಗ ಮಾರ್ಗ, ವೈಟ್ ಟಾಪಿಂಗ್ ಮುಂತಾದ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಅಲ್ಪಾವಧಿ ಕಾಮಗಾರಿಯಲ್ಲಿ ರಸ್ತೆಯನ್ನು ಬಳಕೆಗೆ ಯೋಗ್ಯವಾಗಿಸುವುದು ಹಾಗೂ ದೀರ್ಘಾವಧಿ ಕಾಮಗಾರಿ ಗಳಲ್ಲಿ ಸುರಂಗ ಮಾರ್ಗ ನಿರ್ಮಾಣ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT