ರಾಜ್ಯ

ಬೆಳಗಾವಿ: ನವಿಲು ತೀರ್ಥ ಜಲಾಶಯ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆ

Sumana Upadhyaya

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. 32 ವರ್ಷದ ಮಹಿಳೆ ತನುಜಾ ಪರಸಪ್ಪ ಗೋಡಿ ಹಾಗೂ ಆಕೆಯ ಮಕ್ಕಳಾದ 4 ವರ್ಷದ ಸುದೀಪ್ ಹಾಗೂ 3 ವರ್ಷದ ರಾಧಿಕಾ ಎಂದು ಗುರುತಿಸಲಾಗಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ ನಿವಾಸಿ ತನುಜಾ ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದ ರಾತ್ರಿ ಮೂರು ಜನರ ಶವಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. 

SCROLL FOR NEXT