ರಾಜ್ಯ

ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ, ಚಾಲಕ, ಪ್ರಯಾಣಿಕನಿಗೆ ಗಾಯ, ಬೆಚ್ಚಿಬಿದ್ದ ಸ್ಥಳೀಯರು!

Vishwanath S

ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಡ ಸ್ಫೋಟ ಸಂಭವಿಸಿದ್ದು ಆಟೋದಲ್ಲಿದ್ದ ಪ್ರಯಾಣಿಕ ಹಾಗೂ ಚಾಲಕನಿಗೆ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ವಿಧಿವಿಜ್ಞಾನ ತಜ್ಞರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ಘಟನೆ ಕುರಿತಂತೆ ಮಾಹಿತಿ ನೀಡಿರುವ ಶಶಿಕುಮಾರ್ ಅವರು, ಪ್ರಯಾಣಿಕನನ್ನು ಕರೆದೊಯ್ಯುತ್ತಿದ್ದ ಆಟೋದಲ್ಲಿ ಸ್ಫೋಟ ಸಂಭವಿಸಿದೆ. ಪ್ರಯಾಣಿಕನ ಬಳಿಕ ಬ್ಯಾಗ್ ಇತ್ತು. ಈ ಸಂಬಂಧ ಪರಿಶೀಲನೆ ನಡೆಸಲಾಗುತ್ತಿದೆ. 

ಸ್ಫೋಟದಿಂದಾಗಿ ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

SCROLL FOR NEXT