ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್; ಮೂವರು ಎಂಜಿನೀಯರಿಂಗ್ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ!

ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಪಾಕ್‌ ಪರ ಘೋಷಣೆ ಕೂಗಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.

ಬೆಂಗಳೂರು:  ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಪಾಕ್‌ ಪರ ಘೋಷಣೆ ಕೂಗಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.

ಇಂಜಿನಿಯರಿಂಗ್‌ ಮೊದಲ ವರ್ಷದ ಆರ್ಯನ್, ದಿನಕರ್‌, ರಿಯಾ ರವಿಚಂದ್ರ ಪಾಕ್ ಪರ ಘೋಷಣೆ ಕೂಗಿ ಉದ್ಧಟತನ ಮೆರೆದಿದ್ದಾರೆ. ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಘೋಷಣೆ ಕೂಗಿದ್ದಾರೆ. ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರು ಘೋಷಣೆಗಳನ್ನು ಕೂಗಿದರೆ, ಮತ್ತೊಬ್ಬರು ಅದನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.

ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾಗಿದ್ದಾರೆ. ಕೂಡಲೇ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ವಿಡಿಯೋ ವೈರಲ್  ಆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕ ಹಾಗೂ ಯುವತಿಯನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ತಾವು ತಮಾಷೆಗಾಗಿ ಈ ರೀತಿ ಮಾಡಿರುವುದಾಗಿ ಪೊಲೀಸರ ಮುಂದೆ ವಿದ್ಯಾರ್ಥಿಗಳು ಹೇಳಿಕೆ ನೀಡಿದ್ದಾರೆ. ಸದ್ಯ ಮಾರತ್​ಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಡಿಯೋ ನೋಡಿದ ಕೆಲ ಯುವಕರು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ್ದಾರೆ. ಆರ್ಯನ್ ನನ್ನು ಥಳಿಸಿ, ಕ್ಷಮೆ ಕೇಳುವಂತೆ ಮಾಡಿ ಕರ್ನಾಟಕ ಪರ ಘೋಷಣೆಗಳನ್ನು ಕೂಗಿದರು. ಕ್ಷಮೆ ಯಾಚಿಸುವ ಸಂದರ್ಭದಲ್ಲಿ, ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶ ತನಗಿಲ್ಲ ಮತ್ತು ಇದೊಂದು ಮೂರ್ಖತನದ ಕೃತ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಮಾರತ್ತಹಳ್ಳಿ ಪೊಲೀಸರು ವಿಡಿಯೊ ಪರಿಶೀಲನೆ ನಡೆಸಿ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT