ನಟ ದರ್ಶನ್-ಸಚಿವ ಮಾಧುಸ್ವಾಮಿ 
ರಾಜ್ಯ

ವನ್ಯಜೀವಿ ಮಂಡಳಿಗೆ ಸದಸ್ಯರಾಗಿ ನಟ ದರ್ಶನ್, ಸಚಿವ ಮಾಧುಸ್ವಾಮಿ ನೇಮಕ!

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್‌ ತೂಗುದೀಪ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಚಿತ್ರನಟ ದರ್ಶನ್‌ ತೂಗುದೀಪ್ ಹಾಗೂ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.

ನಟ ದರ್ಶನ್ ಅವರು ವನ್ಯಜೀವಿ ಛಾಯಾಗ್ರಾಹಕ ಹಾಗೂ ಪ್ರಾಣಿಶಾಸ್ತ್ರ ಪ್ರಾಧಿಕಾರದ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ನವೆಂಬರ್ 15ರಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಿದೆ.

ಅಂತೆಯೇ ಮಂಡಳಿಯ ಸದಸ್ಯರಾಗಿದ್ದ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ ಅವರ ಬದಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ. ಇಬ್ಬರ ಸದಸ್ಯತ್ವದ ಅವಧಿ 2023 ರ ಅಕ್ಟೋಬರ್ 15ರವರೆಗೆ ಅಥವಾ ಮುಂದಿನ ಆದೇಶದವರೆಗೆ ಇರಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT