ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ತಳ ಸಮುದಾಯದವರಿಗೆ ಸ್ವಾಭಿಮಾನದ ಬದುಕು ನೀಡಲು ಮೀಸಲಾತಿ ಹೆಚ್ಚಳ: ಸಿಎಂ ಬೊಮ್ಮಾಯಿ

ಪರಿಶಿಷ್ಟ ಸಮುದಾಯಕ್ಕೆ ಶೇ. 15 ರಿಂದ 17 ಹಾಗೂ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.  3 ರಿಂದ 7ರವರೆಗೆ  ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬಳ್ಳಾರಿ: ಪರಿಶಿಷ್ಟ ಸಮುದಾಯಕ್ಕೆ ಶೇ. 15 ರಿಂದ 17 ಹಾಗೂ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಶೇ.  3 ರಿಂದ 7ರವರೆಗೆ  ಮೀಸಲಾತಿ ಹೆಚ್ಚಳ ಸಂವಿಧಾನಬದ್ಧವಾದ ನಿರ್ಧಾರವಾಗಿದ್ದು, ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬಳ್ಳಾರಿಯಲ್ಲಿಂದು ಆಯೋಜಿಸಿದ್ದ  ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ.  ಪ್ರಧಾನಿ ಏಕ್ ಭಾರತ ,ಶ್ರೇಷ್ಠ ಭಾರತ ಎಂದು ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿದ್ದಾರೆ. ತಳಸಮುದಾಯದವರಿಗೆ ಸ್ವಾಭಿಮಾನದ ಬದುಕನ್ನು ನೀಡಲು ಸರ್ಕಾರ, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳದ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.

ಸಾಮಾಜಿಕ ನ್ಯಾಯ ಒದಗಿಸಿದ ಸರ್ಕಾರದ ಯೋಜನೆಗಳು : ಸರ್ಕಾರ ಎಸ್ ಸಿ ಎಸ್ ಟಿ ಸಮುದಾಯಗಳಿಗೆ 28 ಸಾವಿರಕ್ಕೂ ಹೆಚ್ಚಿನ ಅನುದಾನವನ್ನು ನೀಡಿದೆ.  ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಿಗೆ 6 ಸಾವಿರ ಕೋಟಿ ರೂ. ನೀಡಲಾಗಿದೆ. ಎಸ್ ಟಿ ಸಮುದಾಯಕ್ಕೆ ಪ್ರತ್ಯೇಕ ನಿರ್ದೇಶನಾಲಯವನ್ನು ಸ್ಥಾಪಿಸಲಾಯಿತು. ಹಾಲು ಮತದ ಸಮುದಾಯಕ್ಕೆ ನ್ಯಾಯ ಒದಗಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾಗಿನೆಲೆ ಅಭಿವೃದ್ಧಿ ಅನುದಾನ ನೀಡಿದರು. ವಾಲ್ಮೀಕಿ ಜಯಂತಿಯನ್ನು ಘೋಷಣೆ ಮಾಡಿದರು. ಸಾಮಾಜಿಕ ನ್ಯಾಯವನ್ನು ನಮ್ಮ ಸರ್ಕಾರ ಅಕ್ಷರಶ: ನೀಡಿದೆ ಎಂದರು. 

ಎಸ್ ಸಿ ಎಸ್ ಟಿ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕೆಂಬ ಆಶಯದೊಂದಿದೆ ನಮ್ಮ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದೆ. 100 ಅಂಬೇಡ್ಕರ್ ಹಾಸ್ಟೆಲ್ ಗಳು, 50 ಕನಕದಾಸ ಹಾಸ್ಟೆಲ್ ಗಳನ್ನು ನಿರ್ಮಿಸಲಾಗುತ್ತಿದೆ. ಐದು ಲಕ್ಷ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಐದು ಲಕ್ಷ ಯುವಕರಿಗೆ  ವಿವೇಕಾನಂದ ಯುವಶಕ್ತಿ ಯೋಜನೆಗಳ  ಮೂಲಕ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ವಾಲ್ಮೀಕಿ ರಚಿಸಿದ ರಾಮಾಯಣ, ಪವಿತ್ರ ಧರ್ಮಗ್ರಂಥಗಳಲ್ಲಿ ಒಂದು. ವಾಲ್ಮೀಕಿಯವರು ನಮಗೆ ಸ್ಪೂರ್ತಿ. ದೇಶವನ್ನು ಕಟ್ಟುವ ಕೆಲಸವನ್ನು ವಾಲ್ಮೀಕಿ ಸಮುದಾಯದವರು ಮಾಡಬೇಕು. ಮೊಘಲರನ್ನು ಹಿಮ್ಮೆಟ್ಟಿಸಿದ್ದು, ಈ ಸಮುದಾಯದ ವೀರ ನಾಯಕರು. ವೀರ ಮದಕರಿ, ಏಕಲವ್ಯ,ಬೇಡರ ಕಣ್ಣಪ್ಪ ಎಲ್ಲರೂ ವಾಲ್ಮೀಕಿ ಕುಲವನ್ನು ಶ್ರೇಷ್ಟಗೊಳಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

ಭಾರತೀಯ ಸೇನೆಗೆ ಒಂದು ಲಕ್ಷ 9 MM ಪಿಸ್ತೂಲ್‌ ಖರೀದಿ

SCROLL FOR NEXT