ರಾಜ್ಯ

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಭಯೋತ್ಪಾದಕ ಕೃತ್ಯ ಶಂಕೆ ವ್ಯಕ್ತಿವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ- ಗೃಹ ಸಚಿವ

Manjula VN

ಶಿವಮೊಗ್ಗ: ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೃತ್ಯ ಶಂಕೆಗಳು ವ್ಯಕ್ತವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಹೇಳಿದ್ದಾರೆ.

ಈ ಘಟನೆ ಸಂಬಂಧ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಂಗಳೂರಿನಲ್ಲಿ ಶನಿವಾರ ನಡೆದ ಆಟೋ ರಿಕ್ಷಾ ಸ್ಫೋಟ ಘಟನೆಯ ಬಗ್ಗೆ ರಾಜ್ಯ ಪೊಲೀಸರು, ತೀವ್ರ ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು.

ಇದೊಂದು ಭಯೋತ್ಪಾದನೆ ಸಂಬಂಧಿತ ಘಟನೆಯಾಗಿರಬಹುದು ಎಂಬ ಶಂಕೆ ಇದೆ. ಹೀಗಾಗಿ, ರಾಜ್ಯ ಪೊಲೀಸರ ಜತೆ ಕೇಂದ್ರ ತನಿಖಾ ತಂಡಗಳೂ ಕೈ ಜೋಡಿಸಲಿವೆ ಎಂದು ತಿಳಿಸಿದರು.

ನಗರದ ನಾಗುರಿಯಿಂದ ಪಂಪ್ ವೆಲ್ ಕಡೆಗೆ ಆಟೋರಿಕ್ಷಾವೊಂದು ಸಂಚರಿಸುತ್ತಿತ್ತು. ನಾಗುರಿಯಲ್ಲಿ ಆಟೋ ರಿಕ್ಷಾ ಏರಿಪ್ಪ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ದಾರಿ ಮಧ್ಯೆ ದಿಢೀರ್ ನಿಗೂಢವಾಗಿ ಬೆಂಕಿ ಕಾಣಿಸಿಕೊಂಡು, ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿ ಹಾಗೂ ಆಟೋ ಚಾಲಕನಿಗೆ ಬೆಂಕಿ ತಗುಲಿದ್ದು, ಆಟೋ ಒಳಭಾಗ ಕೂಡ ಸುಟ್ಟು ಕರಕಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

SCROLL FOR NEXT