ನಾಡ ದೇವಿ ಭುವನೇಶ್ವರಿ ತಾಯಿಯ ಅಧಿಕೃತ ಚಿತ್ರ 
ರಾಜ್ಯ

ನಾಡ ದೇವಿ ಭುವನೇಶ್ವರಿ ತಾಯಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಜಾರಿಗೆ ಸರ್ಕಾರದ ಸಮಿತಿ ಶಿಫಾರಸು!

ನಾಡ ದೇವಿ ಭುವನೇಶ್ವರಿ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ.

ಬೆಂಗಳೂರು: ನಾಡ ದೇವಿ ಭುವನೇಶ್ವರಿ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ.

ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ.ಮಹೇಂದ್ರ ನೇತೃತ್ವದ ಸಮಿತಿ ಈ ಶಿಫಾರಸು ನೀಡಿದ್ದು, ಕಲಾವಿದರಾದ ಸೋಮಶೇಖರ್.ಕೆ ಅವರು ರಚಿಸಿರುವ ಚಿತ್ರವನ್ನು ಪ್ರಮಾಣಿತ ಹಾಗೂ ಅಧಿಕೃತವಾಗಿ  ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ. ಬೆಂಗಳೂರು ವಿವಿ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಇದೇ ಆಗಿರಲಿದೆ ಎಂದು ಹೇಳಲಾಗಿದೆ.

ಹಲವಾರು ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಕರ್ನಾಟಕ ರಾಜ್ಯದ ನಾಡದೇವತೆಯ ಭಾವಚಿತ್ರವಾಗಿ ದುರ್ಗಾದೇವಿ, ಸರಸ್ವತಿ ಇತ್ಯಾದಿ ದೇವತೆಗಳ ಚಿತ್ರಗಳನ್ನು ಬಳಸಲಾಗುತ್ತಿದ್ದು, ಒಂದು ನಿರ್ದಿಷ್ಠವಾದ ಚಿತ್ರಕೃತಿಯ ಕೊರತೆಯಿರುವುದನ್ನು ಮನಗಂಡ ಸರ್ಕಾರವು ಒಂದು ನಿರ್ದಿಷ್ಟವಾದ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನು ಒಳಗೊಂಡ ಸಮಿತಿಯನ್ನು ರಚಿಸಿತ್ತು.

ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಕಲೆಯನ್ನು ಬಿಂಬಿಸುವ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಸಮಿತಿ ಸೂಚಿಸಿರುವಂತೆ  ಕಲಾವಿದರಾದ ಸೋಮಶೇಖರ್.ಕೆ ಅವರು ಚಿತ್ರವನ್ನು ಸಿದ್ದಪಡಿಸಿದ್ದಾರೆ.

ಅಧಿಕೃತ ಚಿತ್ರದ ವಿಶೇಷತೆಗಳೇನು?
ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಭಾವಚಿತ್ರದಲ್ಲಿ ಕೆಲ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ. ನಾಡದೇವತೆಯ ಹಿನ್ನೆಲೆಯಲ್ಲಿ ಕರ್ನಾಟಕದ ನಕ್ಷೆ ಇರುತ್ತದೆ. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ. ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ. ಕರ್ನಾಟಕದ ಧ್ವಜ ರಾರಾಜಿಸುತ್ತಿದೆ. ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ. ಕರ್ನಾಟಕದ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಮ್ಮ ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.

ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ-ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ – ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ. ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ್ಯೋತಕಗಳಾಗಿವೆ. ತೆಳುವಾದ-ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರಕ್ಕೆ ಮೆರಗು ನೀಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT