ಮೊಹಮ್ಮದ್ ಶಾರಿಕ್ ಮನೆಯಿಂದ ವಶಪಡಿಸಿಕೊಂಡ ವಸ್ತುಗಳ ತಪಾಸಣೆಯಲ್ಲಿ ತೊಡಗಿರುವ ಎಡಿಜಿಪಿ ಅಲೋಕ್‌ ಕುಮಾರ್ 
ರಾಜ್ಯ

ಮಂಗಳೂರು ಸ್ಫೋಟದ ತನಿಖೆಯನ್ನು ಎನ್‌ಐಎಗೆ ವಹಿಸುವ ಬಗ್ಗೆ ಸರ್ಕಾರ ನಿರ್ಧರಿಸಿಲ್ಲ: ಬಸವರಾಜ ಬೊಮ್ಮಾಯಿ

ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ಹಸ್ತಾಂತರಿಸುವ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

'ಸ್ಫೋಟದಲ್ಲಿ ಗಾಯಗೊಂಡಿರುವ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಗಂಟಲಿನಲ್ಲಿ ಪೈಪ್ ಇದೆ ಮತ್ತು ಅವನಿಗೆ ಮಾತನಾಡಲು ಸಾಧ್ಯವಿಲ್ಲ. ಕುಟುಂಬ ಸದಸ್ಯರು ಆತನ ಗುರುತನ್ನು ಖಚಿತಪಡಿಸಿದ್ದಾರೆ. ನಾವು ಎನ್‌ಐಎಗೆ ವಿವರಗಳನ್ನು ನೀಡಿದ್ದೇವೆ. ಆದರೆ, ಪ್ರಕರಣವನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ' ಎಂದು ಅವರು ಹೇಳಿದರು.

ಪೊಲೀಸರು ಆರೋಪಿಯ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಿದ್ದು, ವಿವಿಧ ಸ್ಥಳಗಳೊಂದಿಗೆ ಆತನ ಸಂಪರ್ಕದ ಕುರಿತು ತನಿಖೆ ನಡೆಸುತ್ತಿದ್ದಾರೆ. ಆತನ ಗುರು ಪತ್ತೆಯಾದ ನಂತರ, ಆತನ ಸಂಪರ್ಕಗಳು ಮತ್ತು ಹಳೆಯ ಪ್ರಕರಣಗಳು ಯಾವುದಾದರೂ ಇದ್ದರೆ ಸೇರಿದಂತೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಈತನ ಹಿಂದೆ ಯಾವುದೇ ಸಂಘಟನೆ ಇದೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ವಿವರಗಳು ಲಭ್ಯವಾದ ನಂತರ, ವಿವರಗಳನ್ನು ಪಡೆದ ನಂತರ, ಅವರು ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ' ಎಂದರು.

ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಕ್ಕೆ ರಾಜ್ಯ ಸರ್ಕಾರವನ್ನು ದೂಷಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಬೊಮ್ಮಾಯಿ, 'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಇಂತಹ ಹಲವು ಪ್ರಕರಣಗಳು ನಡೆದಿದ್ದವು. ಸದ್ಯದ ಘಟನೆಗೆ ಅವರು ಕಾನೂನು ಮತ್ತು ಸುವ್ಯವಸ್ಥೆಯನ್ನು ದೂಷಿಸಲು ಸಾಧ್ಯವಿಲ್ಲ' ಎಂದು ಹೇಳಿದರು.

ಮೈಸೂರಿಗೆ ಎನ್‌ಐಎ ತಂಡ ಭೇಟಿ

ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಐವರು ಸದಸ್ಯರ ತಂಡ ಭಾನುವಾರ ರಾತ್ರಿ ಮೈಸೂರಿಗೆ ಆಗಮಿಸಿದ್ದು, ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಪ್ರಮುಖ ಶಂಕಿತ ಆರೋಪಿ ಎಚ್ ಮೊಹಮ್ಮದ್ ಶಾರಿಕ್ (24) ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವುದು ಬೆಳಕಿಗೆ ಬಂದಿದೆ. ಬಿಕಾಂ ಪದವೀಧರನಾದ ಶಾರಿಕ್ ಮೈಸೂರಿನಲ್ಲಿ ಮೊಬೈಲ್ ಫೋನ್ ರಿಪೇರಿ ತರಬೇತಿ ಪಡೆದಿರುವ ಶಂಕೆ ವ್ಯಕ್ತವಾಗಿದೆ.

ಎನ್ಐಎ ತಂಡ ಶಾರಿಕ್ ಮೈಸೂರಿಗೆ ಭೇಟಿ ನೀಡಿದ ಸಂಗತಿಗಳು, ಸಂಪರ್ಕಗಳು ಮತ್ತು ಸ್ಥಳಗಳ ತನಿಖೆ ನಡೆಸಲಿದೆ. ನಕಲಿ ದಾಖಲೆಗಳನ್ನು ಬಳಸಿ ಬಾಡಿಗೆಗೆ ಪಡೆದಿದ್ದ ಲೋಕನಾಯಕನಗರದಲ್ಲಿರುವ ಶಾರಿಕ್ ಇದ್ದ ಮನೆಗೆ ತಂಡ ಭೇಟಿ ನೀಡಿತ್ತು. ಆತನ ಕೊಠಡಿಯಲ್ಲಿ ಪತ್ತೆಯಾದ ಸ್ಫೋಟಕ ವಸ್ತುಗಳ ಬಗ್ಗೆಯೂ ಎನ್ಐಎ ಮಾಹಿತಿ ಪಡೆದುಕೊಂಡಿದೆ.

ಈಮಧ್ಯೆ, ಮೈಸೂರು ಪೊಲೀಸರು ಮೊಬೈಲ್ ಫೋನ್‌ಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಹೇಳಲಾದ ಶಾರಿಕ್‌ನ ಸ್ನೇಹಿತನ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಕಳೆದೆರಡು ತಿಂಗಳಿನಿಂದ ಆತ ವ್ಯಾಪಕವಾಗಿ ತಮಿಳುನಾಡಿಗೆ ಭೇಟಿ ನೀಡಿರುವುದು ತಿಳಿದುಬಂದಿದೆ.

ಅಲ್ಲದೆ ಮೈಸೂರಿನಲ್ಲಿ ಸಿಸಿಬಿ ಅಧಿಕಾರಿಗಳು, ವಿಶೇಷ ದಳ ಸೇರಿದಂತೆ ಗುಪ್ತಚರ ದಳ ಹೊಸ ಬಾಡಿಗೆದಾರರ ಮಾಹಿತಿ ಕಲೆಹಾಕುತ್ತಿದೆ ಮತ್ತು ಕಟ್ಟುನಿಟ್ಟಿನ ನಿಗಾ ಇರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT