ಸಂಗ್ರಹ ಚಿತ್ರ 
ರಾಜ್ಯ

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಛ ಪ್ರಕರಣ: ಆರೋಪಿ ಬಂಧನ

ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ಮಹದೇವಪ್ಪ (62) ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿಯ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆರೋಪಿಯ ಬಂಧನವಾಗಿರುವುದರಿಂದ ಇದೀಗ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ಆದರೆ, ದಶಕಗಳಿಂದ ತಮಗೆ ಪ್ರವೇಶ ನಿರಾಕರಿಸಲಾಗಿದ್ದ ದೇವಸ್ಥಾನ, ಹೊಟೇಲ್‌ಗಳಿಗೆ ಪ್ರವೇಶ ನೀಡುವಂತೆ ಹೆಗ್ಗಾವತಾರ ಗ್ರಾಮದ ದಲಿತರು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರನ್ನು ಒತ್ತಾಯಿಸಿದ್ದಾರೆ.

ಮಹದೇವಪ್ಪ ಅವರು ಟ್ಯಾಂಕ್‌ಗೆ ನೀರು ಖಾಲಿ ಮಾಡಿ, ಗೋಮೂತ್ರದಿಂದ ಸ್ವಚ್ಛಗೊಳಿಸಿದ ವಿಡಿಯೋ ವೈರಲ್ ಆಗಿತ್ತು. ಘಟನೆ ವರದಿಯಾದ ಬಳಿಕ ಚಾಮರಾಜನಗರ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!