ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ

Manjula VN

ಮಂಗಳೂರು: ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಘಟನಾ ಸ್ಥಳಕ್ಕೆ ಡಿಜಿಪಿ ಪ್ರವೀಣ್ ಸೂದ್ ಅವರೊಂದಿಗೆ ಭೇಟಿ ನೀಡಿದ ಗೃಹ ಸಚಿವರು, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಆಸ್ಟತೆಗೆ ಭೇಟಿ ನೀಡಿ ರಿಕ್ಷಾ ಚಾಲಕ ಪುರುಷೋತ್ತಮ್‌ ಪೂಜಾರಿ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವರೊಂದಿಗೆ ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಡಿಸಿಪಿ ಅಂಶು ಕುಮಾರ್ ಇದ್ದರು.

ಆರಗ ಜ್ಞಾನೇಂದ್ರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭಧಲ್ಲಿ ಸ್ಥಳೀಯ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಜಗದೀಶ್ ಶೇಣವ ಹಾಗೂ ಇತರರು ಕೇಸರಿ ಶಾಲನ್ನು ತೋಡಿಸಿ ಗೃಹ ಸಚಿವರನ್ನು ಬರಮಾಡಿಕೊಂಡರು.

ಘಟನೆ ಸಂಬಂಧ ಉನ್ನತಾಧಿಕಾರಿಗಳೊಂದಿಗೆ ಸಭೆ
ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಗೃಹ ಸಚಿವರು ನಂತರ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತುಕತೆ ನಡೆಸಿದರು.

SCROLL FOR NEXT