ಸಾಂದರ್ಭಿಕ ಚಿತ್ರ 
ರಾಜ್ಯ

ರಾಜಕೀಯ ಬೆಳವಣಿಗೆಗೆ ಅಡ್ಡಿ ಆರೋಪ: ಪಕ್ಷದ ಕಾರ್ಯಕರ್ತ ಆತ್ಮಹತ್ಯೆ

ದೊಡ್ಡಬಳ್ಳಾಪುರದಲ್ಲಿ ಸೋಮವಾರ ಸಂಜೆ 32 ವರ್ಷದ ರಾಜಕೀಯ ಪಕ್ಷದ ಕಾರ್ಯಕರ್ತರೊಬ್ಬರು ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೋಮವಾರ ಸಂಜೆ 32 ವರ್ಷದ ರಾಜಕೀಯ ಪಕ್ಷದ ಕಾರ್ಯಕರ್ತರೊಬ್ಬರು ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ಮೃತರನ್ನು ಕಚೇರಿಪಾಳ್ಯ ನಿವಾಸಿ ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ. ತನ್ನ ರಾಜಕೀಯ ಬೆಳವಣಿಗೆಗೆ ಅಡ್ಡಿಪಡಿಸಲು ಯತ್ನಿಸಿದ್ದಕ್ಕೆ ಮಹಿಳೆ ಸೇರಿದಂತೆ ನಾಲ್ವರ ಹೆಸರನ್ನು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ.

ವಿನೋದ್ ಕುಮಾರ್ ಹಲವಾರು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು ಮತ್ತು ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿದ್ದರಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ.

ಕುಮಾರ್ ಅವರ ಕುಟುಂಬದ ದೂರಿನ ಆಧಾರದ ಮೇಲೆ ಕೌನ್ಸಿಲರ್ ಮಂಜುನಾಥ್, ನಾರಾಯಣಪ್ಪ, ಧರ್ಮೇಶ್ ಮತ್ತು ಗುತ್ತಿಗೆದಾರರ ಪತ್ನಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಮಾರ್ ಕಾಂಗ್ರೆಸ್ ಜೊತೆ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಬಿಜೆಪಿಗೆ ತೆರಳಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇದರ ಬೆನ್ನಲ್ಲೇ ಬಿಜೆಪಿ ಜತೆ ಇರಬೇಡಿ ಎಂದು ಕುಮಾರ್‌ ಅವರಿಗೆ ಮಂಜುನಾಥ್ ಕಿರುಕುಳ ನೀಡಲಾರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಮೃತದೇಹ ಹೊರತೆಗೆಯಲಾಯಿತು. ಕುಮಾರ್ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT