ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಾತುಕತೆ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳುವ ಬಗ್ಗೆ ಸರ್ವಪಕ್ಷ ಸಭೆ ಕರೆದು ನಿರ್ಧಾರ: ಸಿಎಂ ಬೊಮ್ಮಾಯಿ‌

ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಸಿಎಂ ಬಸವರಾಜ ಬೊಮ್ಮಾಯಿ
Lingaraj Badiger
Updated On : 24 Nov 2022, 7:33 pm

ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಗುರುವಾರ ಹೇಳಿದ್ದಾರೆ.

ಇಂದು ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಮುಂದಿನ ವಾರ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿ: ಗಡಿ ವಿವಾದ: ಕೋರ್ಟ್ ಮೆಟ್ಟಿಲೇರಿ ಇದೀಗ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದ 'ಮಹಾ' ಸಿಎಂ

Advertisement

Advertisement

ಮಹಾರಾಷ್ಟ್ರ ಸರ್ಕಾರವೇ ಸುಪ್ರೀಂ ಕೋರ್ಟ್​ನಲ್ಲಿ ದಾವೆ ಹೂಡಿದೆ. ನಾವು ವಾದ ಮಂಡನೆಗೆ ಸಮರ್ಥವಾಗಿ ತಯಾರಿ‌ ಮಾಡಿಕೊಂಡಿದ್ದೇವೆ. ಈ ಮಧ್ಯೆ ಮಾತುಕತೆ ನಡೆಸುವ ಕುರಿತು ಹೇಳಿಕೆ ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ವಾದ ಮಾಡುವ ಬಗ್ಗೆ ಈ‌ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದು ಸಿಎಂ ಹೇಳಿದರು.

ಸದ್ಯ ನಮ್ಮ ಮುಂದೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸುವ ಉದ್ದೇಶ ಇದೆ. ಆದರೆ ಮಾತುಕತೆ ಬಗ್ಗೆ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಗಡಿ ವಿಚಾರವೇ ಮುಗಿದು ಹೋಗಿದೆ. ಜತ್ ತಾಲೂಕು ಕರ್ನಾಟಕಕ್ಕೆ ಸೇರುವ ಬಗ್ಗೆ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು ನಿರ್ಧರಿಸಿವೆ. ಇವೆಲ್ಲ ಸುಪ್ರೀಂಕೋರ್ಟ್ ಮುಂದೆ ವಾದ ಮಂಡನೆ ವೇಳೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments