ರಾಜ್ಯ

10 ದಿನಗಳ ಚಳಿಗಾಲ ಅಧಿವೇಶನಕ್ಕೆ ಬೆಳಗಾವಿಯಲ್ಲಿ ಸಿದ್ಧತೆ

Manjula VN

ಬೆಳಗಾವಿ: ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿವೇಶನವನ್ನು ಪರಿಣಾಮಕಾರಿಯಾಗಿ ನಡೆಸುವ ಬಗ್ಗೆ ಚರ್ಚಿಸಿದರು. ಪಾಟೀಲ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಹಾರ, ಸಾರಿಗೆ, ಆರೋಗ್ಯ ಮತ್ತು ಇತರ ಸೌಲಭ್ಯಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಅಧಿವೇಶನ ಸುಗಮವಾಗಿ ನಡೆಸಲು ಜಿಲ್ಲಾಡಳಿತ ರಚಿಸಿರುವ ಎಲ್ಲ ಸಮಿತಿಗಳೊಂದಿಗೆ ಪಾಟೀಲ್ ಅವರು ಮಾತುಕತೆ ನಡೆಸಿದರು.

ಬೆಳಗಾವಿಯಲ್ಲಿ ತಂಗುವ ಸಂದರ್ಭದಲ್ಲಿ ಯಾವುದೇ ಅತಿಥಿಗಳಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.

ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಜತೆಗೆ ನಗರದೆಲ್ಲೆಡೆ ಸ್ವಚ್ಛತೆ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಬೆಳಗಾವಿ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಭದ್ರತೆ, ವಾಹನಗಳ ಸಂಚಾರ ಮತ್ತು ಪಾರ್ಕಿಂಗ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗುವುದು ಎಂದರು.

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಮಾತನಾಡಿ, ಖಾಸಗಿ ಮತ್ತು ಸರ್ಕಾರಿ ವಸತಿ ಗೃಹಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ್ ಕೋಣೆ ಮಾತನಾಡಿ, ನಗರದಾದ್ಯಂತ ಹಲವಾರು ವೈದ್ಯರು ಮತ್ತು ಇತರ ಆರೋಗ್ಯ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗುವುದು. ಆಂಬ್ಯುಲೆನ್ಸ್‌ಗಳನ್ನು ಕೂಡ ಸಿದ್ಧವಾಗಿ ಇರಿಸಲಾಗುವುದು ಎಂದು ತಿಳಿಸಿದರು.

SCROLL FOR NEXT