ಸಿಎಂ ಬೊಮ್ಮಾಯಿ 
ರಾಜ್ಯ

ಡಿಸೆಂಬರ್ 18 ರಂದು ವಿಷ್ಣುವರ್ಧನ್ ಸ್ಮಾರಕ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ

ಎಲ್ಲವೂ ಅಂದುಕೊಂಡಂತೆ ನಡೆದರೆ, ದಿವಂಗತ ನಟ ಡಾ,ವಿಷ್ಣುವರ್ಧನ್ ಅವರ ಬಹುನಿರೀಕ್ಷಿತ ಸ್ಮಾರಕವು ಅವರ ಹುಟ್ಟೂರಾದ ಮೈಸೂರಿನಲ್ಲಿ ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ.

ಮೈಸೂರು: ಎಲ್ಲವೂ ಅಂದುಕೊಂಡಂತೆ ನಡೆದರೆ, ದಿವಂಗತ ನಟ ಡಾ,ವಿಷ್ಣುವರ್ಧನ್ ಅವರ ಬಹುನಿರೀಕ್ಷಿತ ಸ್ಮಾರಕವು ಅವರ ಹುಟ್ಟೂರಾದ ಮೈಸೂರಿನಲ್ಲಿ ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್‌.18 ರಂದು ಸ್ಮಾರಕ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಭರದ ಸಿದ್ಧತೆಗಳು ನಡೆಯುತ್ತಿವೆ.

11 ಕೋಟಿ ರೂ ವೆಚ್ಚದಲ್ಲಿ ಎಚ್.ಡಿ.ಕೋಟೆ ರಸ್ತೆಯ ಉದ್ಬೂರು ಕ್ರಾಸ್ ಬಳಿ ಹಾಲಾಳು ಗ್ರಾಮದ ಬಳಿ ಐದು ಎಕರೆ ಜಾಗದಲ್ಲಿ 1,450 ಚದರ ಮೀಟರ್‌ನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ವಿಷ್ಣುವರ್ಧನ್ ನಿಧನದ 13 ವರ್ಷಗಳ ನಂತರ ಸ್ಮಾರಕವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತುದೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಸೆಪ್ಟೆಂಬರ್ 15, 2020 ರಂದು ಸ್ಮಾರಕಕ್ಕೆ ಅಡಿಪಾಯ ಹಾಕಿದ್ದರು. ಸ್ಮಾರಕವು ನಟನ 20 ಅಡಿ ಪ್ರತಿಮೆಯನ್ನು ಒಳಗೊಂಡಿದೆ.

ನಟನ ಸಿನಿ ಪಯಣ ಗ್ಯಾಲರಿ, ಪುಸ್ತಕಗಳು ಮತ್ತು ಇತರ ಬೃಹತ್ ಸಂಗ್ರಹಗಳನ್ನು ಇಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT