ರಾಜ್ಯ

ಸಚಿವ ಸುಧಾಕರ್‌ ವಿರುದ್ಧ ಸಮನ್ಸ್ ಜಾರಿಗೆ ಆದೇಶ: ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕೋರ್ಟ್‌ ಸೂಚನೆ

Shilpa D

ಬೆಂಗಳೂರು: ಸಚಿವ ಡಾ.ಕೆ ಸುಧಾಕರ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತದ ಸಂದರ್ಭದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕೆ. ಸುಧಾಕರ್ ಅವರನ್ನು ನೇಮಕ ಮಾಡಲಾಗಿತ್ತು. ಈ ವೇಳೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಅದನ್ನು ಪ್ರಶ್ನೆ ಮಾಡಿದ್ದರು. ಸುಧಾಕರ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಅರ್ಹತೆ ಹೊಂದಿಲ್ಲ ಎಂದು ಆಕ್ಷೇಪಿಸಿದ್ದರು. ಅಲ್ಲದೇ ಹೈಕೋರ್ಟ್‌ನ ಸಾರ್ವಜನಿಕಾ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತಂತೆ ಆಂಜನೇಯ ರೆಡ್ಡಿ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್‌ ಅವರು, ಸುಧಾಕರ್‌ ಸೇರಿದಂತೆ ಪ್ರಕರಣದ ಮೂವರು ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸೂಚಿಸಿ, ಸಮನ್ಸ್‌ ಜಾರಿಗೊಳಿಸಲು ಆದೇಶಿಸಿದ್ದಾರೆ.

‘ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ’ ಎಂದು‌ ಸುಧಾಕರ್ ಅವರು ಸಾರ್ವಜನಿಕ ಸಭೆಯೊಂದರಲ್ಲಿ ಆರೋಪ ಮಾಡಿದ್ದರು. ‘ಇದು ನನ್ನ ತೇಜೋವಧೆ’ ಎಂದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸುಧಾಕರ್‌ ವಿರುದ್ಧ ಅವರು ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಡಾ ಕೆ ಸುಧಾಕರ್ ಸಾರ್ವಜನಿಕ ಸಭೆಯೊಂದರಲ್ಲಿ ಅರ್ಜಿದಾರ ವಿರುದ್ದ ತೇಜೋವಧೆ ಮಾಡಿದ್ದಾರೆ. ಸಚಿವ ಡಾ ಕೆ ಸುಧಾಕರ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಆರ್ ಅಂಜನೇಯ ರೆಡ್ಡಿ ಇದೀಗಾ ನ್ಯಾಯಲಯ ಕ್ರಿಮಿನಲ್ ದಾಖಲಿಸುವಂತೆ ಸೂಚಿಸಿ ಸಮನ್ಸ್ ಜಾರಿಗೊಳಿಸಲು ಆದೇಶ ನೀಡಿದೆ.

SCROLL FOR NEXT