ರಾಜ್ಯ

ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ

Sumana Upadhyaya

ಬೆಂಗಳೂರು: ಕರ್ನಾಟಕದ ಗಡಿ ಹಾಗೂ ಕನ್ನಡಿಗರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮಹಾರಾಷ್ಟ್ರ ಗಡಿಭಾಗದಲ್ಲಿ ಮರಾಠಿಗರ ಪುಂಡಾಟ ಮಿತಿಮೀರಿದ್ದು ಇಂದು ಕರ್ನಾಟಕ ಸಾರಿಗೆಗೆ ಕಪ್ಪು ಬಣ್ಣದಲ್ಲಿ ಮಸಿ ಬಳೆದು ಮರಾಠಿ ಭಾಷೆಯಲ್ಲಿ ಬರೆದಿರುವ ಬಗ್ಗೆ ಕೇಳಿದಾಗ ಸಿಎಂ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು. ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ  ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. 

ರಾಜ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮಹಾರಾಷ್ಟ್ರ ಕ್ರಮ ವಹಿಸಬೇಕು: ಭಾರತ ರಾಜ್ಯಗಳ ಒಕ್ಕೂಟ. ಪ್ರತಿ ರಾಜ್ಯಕ್ಕೂ ತನ್ನದೇ  ಆದ ಹಕ್ಕುಗಳಿವೆ. ರಾಜ್ಯಗಳನ್ನು  ರಾಜ್ಯ ಮರುವಿಂಗಡನಾ ಕಾಯ್ದೆಯಡಿ ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯಗಳ ಕರ್ತವ್ಯವಾಗಿದ್ದು, ರಾಜ್ಯಗಳ ನಡುವೆ ಶಾಂತಿ ಕಾಯ್ದುಕೊಳ್ಳಬೇಕಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣವೇ ಕ್ರಮ ಕೈಗೊಂಡು ರಾಜ್ಯಗಳ ನಡುವಿನ ಅಂತರವನ್ನು ಕಡಿಮೆಮಾಡಬೇಕು. ನಾವು ಕಾನೂನು ಪಾಲಿಸುವವರಾಗಿದ್ದು, ನಮ್ಮ ಹಕ್ಕುಗಳ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ. ಮಹಾರಾಷ್ಟ್ರ 2004 ರಲ್ಲಿ ಪ್ರಕರಣ ದಾಖಲಿಸಿತ್ತು.  ನಾವು ನ್ಯಾಯಾಲಯದಲ್ಲಿ ಹೋರಾಡುತ್ತಿದ್ದೇವೆ ಎಂದರು.

ನಮ್ಮ ಮೊದಲ ಆದ್ಯತೆ ಕಾನೂನಾತ್ಮಕ ಹೋರಾಟ ಮಾಡುವುದಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಅದರ ತೀರ್ಪಿಗಾಗಿ ಕಾಯಬೇಕು. ಪ್ರಕರಣವು ಅದರ ಅರ್ಜಿಯ ಅರ್ಹತೆಯ ಮೇಲೆ ನಿಂತಿಲ್ಲ, ಬದಲಾಗಿ ಮೆಂಟೇನಬಿಲಿಟಿ ಆಧಾರದ ಮೇಲೆ ನಿಂತಿದೆ. ಕಲಂ 3 ಕೂಡ ಬಹಳ ಸ್ಪಷ್ಟವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ಬಗ್ಗೆ ಒಂದು ನಿರ್ಣಯಕ್ಕೆ ಬರಬೇಕಿದೆ ಎಂದರು. ಮುಂದಿನ ವಾರದಲ್ಲಿ ಸರ್ವ ಪಕ್ಷ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

SCROLL FOR NEXT