ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ 
ರಾಜ್ಯ

ಹೂಡಿಕೆದಾರರ ಓಲೈಸಲು ಬೆಂಗಳೂರಿಗೆ ಬಂದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್!

ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರು: ಕರ್ನಾಟಕವು ಜಾಗತಿಕ ಹೂಡಿಕೆದಾರರ ಸಭೆ ಮತ್ತು ಬೆಂಗಳೂರು ಟೆಕ್ ಶೃಂಗಸಭೆಯನ್ನು ಆಯೋಜಿಸಿದ ಬೆನ್ನಲ್ಲೇ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೂಡಿಕೆದಾರರನ್ನು ಸೆಳೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಹೂಡಿಕೆದಾರರೊಂದಿಗೆ ಸುದೀರ್ಘವಾಗಿ ಮಾತನಾಡಿದ ಚೌಹಾಣ್ ಅವರು, ರಾಜ್ಯದ ಸಾಮರ್ಥ್ಯವನ್ನು ಉದ್ಯಮ ಸಂಸ್ಥೆಗಳಿಗೆ ಪ್ರದರ್ಶಿಸಿದರು.

“ನನ್ನ ಪ್ರತಿ ಸೋಮವಾರ ಹೂಡಿಕೆದಾರರಿಗೆ ಮೀಸಲಾಗಿದೆ. ನಾನು ಮತ್ತು ನನ್ನ ತಂಡವು ಯಾವಾಗಲೂ ನಿಮಗೆ ಲಭ್ಯವಿರುತ್ತೇವೆ ಎಂದು ಹೂಡಿಕೆದಾರರಿಗೆ ತಿಳಿಸಿದರು.

ಇದೇ ವೇಳೆ 2023 ರ ಜನವರಿಯಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ  ಆಯೋಜಿಸುವುದಾಗಿ ಘೋಷಿಸಿದರು.

ಬಳಿಕ ಬೆಂಗಳೂರಿನಲ್ಲಿ ಎಸ್‌ಸಿಎಂ ಟೆಕ್ಸ್‌ಟೈಲ್ಸ್ (ಚೆನ್ನೈ ಸಿಲ್ಕ್ಸ್) ವ್ಯವಸ್ಥಾಪಕ ನಿರ್ದೇಶಕ ಪಿಪಿಕೆ ಪರಮಶಿವಂ ಅವರನ್ನು ಭೇಟಿ ಮಾಡಿದ ಚೌಹಾಣ್ ಅವರು, ಮಧ್ಯಪ್ರದೇಶದಲ್ಲಿ ಸ್ಥಾವರವನ್ನು ಸ್ಥಾಪಿಸುವ ಕುರಿತು ಪ್ರಸ್ತಾಪಿಸಿದರು. ಇದರಿಂದ ಸುಮಾರು 2,000 ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.

ಟ್ರೈಡೆಂಟ್, ವರ್ಧಮಾನ್, ಎಸಿಎಲ್ ಮತ್ತು ಗೋಕುಲದಾಸ್ ಸೇರಿದಂತೆ ರಾಜ್ಯದಲ್ಲಿ ಪ್ರಸ್ತುತ ಇರುವ ದೊಡ್ಡ ಕೈಗಾರಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಜವಳಿ ಉದ್ಯಮಕ್ಕೆ ಹೂಡಿಕೆಗಳನ್ನು ಸೆಳೆಯಲು ಒತ್ತು ನೀಡಿದರು.

ಕರ್ನಾಟಕದ ಕೈಗಾರಿಕೆಗಳ ಸ್ಥಾಪನೆ, ಕಾರ್ಯಾಚರಣೆ ಮತ್ತು ನಿರ್ಬಂಧಗಳಲ್ಲಿ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT