ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಟೆಸ್ಟ್ ರೈಡ್ ನೆಪದಲ್ಲಿ 19 ದ್ವಿಚಕ್ರ ವಾಹನಗಳ ಕದ್ದಿದ್ದ ಇಬ್ಬರು ಯುವಕರ ಬಂಧನ

ಟೆಸ್ಟ್ ರೈಡ್ ನೆಪದಲ್ಲಿ 19 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಇಬ್ಬರು ಯುವಕರನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಟೆಸ್ಟ್ ರೈಡ್ ನೆಪದಲ್ಲಿ 19 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಇಬ್ಬರು ಯುವಕರನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಡಿಜೆ ಹಳ್ಳಿಯ ನಿವಾಸಿಗಳಾದ ಯಾಸಿನ್ ಬೇಗ್ (22) ಮತ್ತು ಇಮ್ರಾನ್ ಖಾನ್ (24) ಬಂಧಿತ ಆರೋಪಿಗಳಾಗಿದ್ದಾರೆ.

ಆನ್‌ಲೈನ್‌ನಲ್ಲಿ ಜಾಹೀರಾತು ಹಾಕುವ ಮೂಲಕ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲು ಬಯಸುವ ವಾಹನ ಮಾಲೀಕರನ್ನು ಆರೋಪಿಗಳು ಗುರಿಯಾಗಿರಿಸಿಕೊಳ್ಳುತ್ತಿದ್ದರು. ಬೈಕ್ ಖರೀದಿಸುವ ನೆಪದಲ್ಲಿ ಆರೋಪಿಗಳು ಮಾಲಿಕರ ಬಳಿ ಬಂದು ಪರೀಕ್ಷಾರ್ಥ ಸವಾರಿಯ ನೆಪದಲ್ಲಿ ವಾಹನಗಳ ಕದ್ದು ಪರಾರಿಯಾಗುತ್ತಿದ್ದರು.

ಇದೀಗ ಈ ಇಬ್ಬರಿಂದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಕದ್ದ ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಯಲಹಂಕ, ಬಾಣಸವಾಡಿ, ಯಶವಂತಪುರ, ಮಹದೇವಪುರ, ಕೊತ್ತನೂರು, ಇಂದಿರಾನಗರ, ಗೋವಿಂದಪುರ, ವಿವಿ ಪುರಂ, ಎಚ್‌ಎಸ್‌ಆರ್ ಲೇಔಟ್ ಮತ್ತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದಾರೆ. ಇಬ್ಬರಿಂದ 19 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!