ವಿನಯಾ ಪ್ರಸಾದ್ 
ರಾಜ್ಯ

ಬೆಂಗಳೂರು: ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ

ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗೇಶ್ (36) ಹಾಗೂ ರವಿ (26) ಬಂಧಿತರು. ಇವರಿಬ್ಬರು ಠಾಣೆ ವ್ಯಾಪ್ತಿಯ 5 ಕಡೆಗಳಲ್ಲಿ ಕಳ್ಳತನ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳಿಂದ 13.53 ಲಕ್ಷ ರು. ಮೌಲ್ಯದ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ನಂದಿನಿ ಲೇಔಟ್‌ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ಪತಿ ಜೊತೆ ವಿನಯಾ ಪ್ರಸಾದ್ ವಾಸವಿದ್ದಾರೆ. ಕುಟುಂಬದವರೆಲ್ಲ ಅಕ್ಟೋಬರ್ 22ರಂದು ಉಡುಪಿಗೆ ಹೋಗಿದ್ದರು. ಅ. 26ರಂದು ಸಂಜೆ ಮನೆಗೆ ವಾಪಸ್ ಬಂದು ನೋಡಿದಾಗ, ವಸ್ತುಗಳು ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದವು. ಪರಿಶೀಲಿಸಿದಾಗ 7 ಸಾವಿರ ರು. ನಗದು ಕಳ್ಳತನವಾಗಿದ್ದು ಗೊತ್ತಾಗಿತ್ತು. ಠಾಣೆಗೆ ದೂರು ನೀಡಿದ್ದರು.

ವಿನಯಾ ಪ್ರಸಾದ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ್ದ ಆರೋಪಿಗಳು, ಬಾಗಿಲು ಮೀಟಿ ಒಳನುಗ್ಗಿ ಕಳ್ಳತನ ಮಾಡಿದ್ದರು. ಆದರೆ, ಅವರಿಗೆ 7 ಸಾವಿರ ರು. ಮಾತ್ರ ಸಿಕ್ಕಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಚನ್ನರಾಯಪಟ್ಟಣದಿಂದ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಕದ್ದ ವಸ್ತುಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು’ ಎಂದರು.

ಬಂಧಿತ ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ಆರೋಪಿ ಅಯ್ಯಪ್ಪ ವಿರುದ್ಧ 17 ಪ್ರಕರಣ ಹಾಗೂ ರವಿ ವಿರುದ್ಧ 9 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ