ರಾಜ್ಯ

ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ: ಸಿಎಂ ಬೊಮ್ಮಾಯಿ

Manjula VN

ಶಿವಮೊಗ್ಗ: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿ ಸಮಾಜದಲ್ಲಿ ಸಮಾನತೆ ಕಾಪಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು.

ಶಿವಮೊಗ್ಗದಲ್ಲಿ ನಡೆದ ರಾಜ್ಯ ಬಿಜೆಪಿಯ ಪ್ರಾಶಿಕ್ಷಾ ವರ್ಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಸಾಮಾನ್ಯ ಕಾನೂನಾಗಿದ್ದು, ಇದು ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಅನ್ವಯವಾಗಬೇಕು. ರಾಜ್ಯದಲ್ಲಿ ಈ ಕಾನೂನನ್ನು ತರಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಹೇಳಿದರು.

ಭಾರತದ ಸಂವಿಧಾನವು ಯುಸಿಸಿಯನ್ನು ರಾಜ್ಯ ನೀತಿಯ ಡೈರೆಕ್ಟಿವ್ ಪ್ರಿನ್ಸಿಪಲ್ಸ್‌ನಲ್ಲಿ ಪಟ್ಟಿಮಾಡಿದೆ, ಇದು ಅಪೇಕ್ಷಣೀಯ ಉದ್ದೇಶವನ್ನಾಗಿ ಮಾಡುತ್ತದೆ, ಆದರೆ, ಇದು ನ್ಯಾಯಸಮ್ಮತವಲ್ಲ. ದಶಕಗಳಿಂದ, ನಿರ್ದಿಷ್ಟವಾಗಿ ಬಿಜೆಪಿ ಯುಸಿಸಿಗಾಗಿ ಒತ್ತಾಯಿಸಿದೆ ಮತ್ತು ಸುಪ್ರೀಂ ಕೋರ್ಟ್ ಕೆಲವು ಸಂದರ್ಭಗಳಲ್ಲಿ ಅದರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಮೇ 2022 ರಲ್ಲಿ, ಉತ್ತರಾಖಂಡ ಸರ್ಕಾರವು ಯುಸಿಸಿಯನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ರಂಜನಾ ದೇಸಾಯಿ ನೇತೃತ್ವದ ಸಮಿತಿಯನ್ನು ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಕ್ಟೋಬರ್ 29, 2022 ರಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಯುಸಿಸಿಯನ್ನು ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದೆ ಮತ್ತು ಈ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಘೋಷಿಸಿದ್ದರು. ಅಸ್ಸಾಂ ಮತ್ತು ಹಿಮಾಚಲ ಪ್ರದೇಶ ಕೂಡ ಯುಸಿಸಿಯನ್ನು ಜಾರಿಗೆ ತರುವ ಇಂಗಿತವನ್ನು ವ್ಯಕ್ತಪಡಿಸಿವೆ.

SCROLL FOR NEXT