ಸಾಂದರ್ಭಿಕ ಚಿತ್ರ 
ರಾಜ್ಯ

ಮದ್ಯವ್ಯಸನಿ ಮಗನನ್ನು ಡಂಬಲ್ಸ್‌ನಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಅಪ್ಪ

ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ ಉಪವಿಭಾಗದ ದೇವಲಾಪುರದಲ್ಲಿ ಶುಕ್ರವಾರ ಮಧ್ಯಾಹ್ನ ಹಿರಿಯ ನಾಗರಿಕರೊಬ್ಬರು ತಮ್ಮ ಮಗನನ್ನು ಕಬ್ಬಿಣದ ಡಂಬಲ್ಸ್‌ನಿಂದ ಹೊಡೆದು ಕೊಂದಿದ್ದು, ಬಳಿಕ ಪೊಲೀಸರ ಮುಂದೆ ಶರಣಾಗಿದ್ದಾರೆ.

ಬೆಂಗಳೂರು: ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ ಉಪವಿಭಾಗದ ದೇವಲಾಪುರದಲ್ಲಿ ಶುಕ್ರವಾರ ಮಧ್ಯಾಹ್ನ ಹಿರಿಯ ನಾಗರಿಕರೊಬ್ಬರು ತಮ್ಮ ಮಗನನ್ನು ಕಬ್ಬಿಣದ ಡಂಬಲ್ಸ್‌ನಿಂದ ಹೊಡೆದು ಕೊಂದಿದ್ದು, ಬಳಿಕ ಪೊಲೀಸರ ಮುಂದೆ ಶರಣಾಗಿದ್ದಾರೆ.

ಮೃತ ತ್ಯಾಗರಾಜ್‌ಗೆ 38 ವರ್ಷವಾಗಿದ್ದರೆ, ತಂದೆ ಮುನಿಸ್ವಾಮಿಗೆ 65 ವರ್ಷ ವಯಸ್ಸಾಗಿದೆ. ಇಬ್ಬರೂ ದಿನಗೂಲಿ ಕಾರ್ಮಿಕರಾಗಿದ್ದು, ಮದ್ಯ ಸೇವಿಸಲು ಹಣಕ್ಕಾಗಿ ತ್ಯಾಗರಾಜ್‌ ಪೋಷಕರಿಗೆ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಚಿತ್ರಹಿಂಸೆಯನ್ನು ತಾಳಲಾರದೆ, ಅವರು ತಮ್ಮ ಮಗಳೊಂದಿಗೆ ಇರಲು ಪ್ರಾರಂಭಿಸಿದ್ದಾರೆ. ಆಗಲೂ, ತ್ಯಾಗರಾಜ್ ತನ್ನ ಸಹೋದರಿಯ ನಿವಾಸಕ್ಕೆ ಭೇಟಿ ನೀಡಿ ಕಿರುಕುಳ ನೀಡುತ್ತಲೇ ಇದ್ದ. ಹಣ ನೀಡದಿದ್ದರೆ, ತನ್ನ ವೃದ್ಧ ಪೋಷಕರಿಗೆ ಥಳಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಆತನ ಕಿರುಕುಳದಿಂದ ಹತಾಶರಾಗಿದ್ದ ಮುನಿಸ್ವಾಮಿ ತಮ್ಮ ಮಗನನ್ನು ಕೊಂದು ರಕ್ತದ ಕಲೆಯಿದ್ದ ಡಂಬಲ್ಸ್‌ಗಳೊಂದಿಗೆ ಪೊಲೀಸರ ಮೊರೆ ಹೋಗಿದ್ದಾರೆ. ಸದ್ಯ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

'ಶುಕ್ರವಾರ ಮಧ್ಯಾಹ್ನ ತ್ಯಾಗರಾಜ್ ಮತ್ತು ಆತನ ತಂದೆಯೊಂದಿಗೆ ಜಗಳ ಉಂಟಾಗಿದೆ. ಜಗಳ ವಿಕೋಪಕ್ಕೆ ತಿರುಗಿ ರೋಸಿಹೋಗಿದ್ದ ತಂದೆ ಡಂಬಲ್ಸ್‌ನಿಂದ ತಲೆಗೆ ಹೊಡೆದು ಕೊಂದಿದ್ದಾರೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾರೆ. ನಂತರ ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಿದೆ.

ಕುಟುಂಬದ ಇತರ ಸದಸ್ಯರೊಂದಿಗೆ ಮಾತನಾಡಿದ ನಂತರ ಸಂತ್ರಸ್ತ ನೀಡುತ್ತಿದ್ದ ಕಿರುಕುಳದ ಬಗ್ಗೆ ನಮಗೆ ತಿಳಿಯಿತು ಎಂದು ಪೊಲೀಸರು ತಿಳಿಸಿದ್ದು, ಭಾರತೀಯ ದಂಡ ಸಂಹಿತೆ ಕಲಂ 302 ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!