ಸಾಂದರ್ಭಿಕ ಚಿತ್ರ 
ರಾಜ್ಯ

ಮುಖ್ಯಮಂತ್ರಿ ಕಚೇರಿಯಲ್ಲಿ ಮಹತ್ವದ ಕಡತ ನಾಪತ್ತೆ: ಲಂಚ, ಮಂಚದ ಪರಿಣಾಮವೇ ಇದಕ್ಕೆ ಕಾರಣ ಎಂದ ಕಾಂಗ್ರೆಸ್

ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರ್ಯಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ?. ಸಿಎಂ ಕಚೇರಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಿಡಿತದಲ್ಲಿ ಇಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಿಂದ ಮಹತ್ವದ ಕಡತ ಒಂದು ಕಾಣೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಸಿಎಂ ಆಪ್ತ ಕಾರ್ಯದರ್ಶಿಯ ಹನಿಟ್ರ್ಯಾಪ್ ವಿಚಾರಕ್ಕೂ, ಕಡತ ಕಾಣೆಯಾಗಿರುವುದಕ್ಕೂ ಸಂಬಂಧವಿದೆಯೇ?. ಸಿಎಂ ಕಚೇರಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಿಡಿತದಲ್ಲಿ ಇಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿಗೆ ಸಂಬಂಧಿಸಿದ ಮಹತ್ವದ ಕಡತವನ್ನೇ ರಕ್ಷಿಸಲಾಗದವರು ರಾಜ್ಯ ರಕ್ಷಿಸಲು ಸಾಧ್ಯವೇ? ಸಿಎಂ ಕಚೇರಿಯಲ್ಲಿರುವ ಲಂಚ, ಮಂಚದ ಪರಿಣಾಮ ಮಹತ್ವದ ಕಡತಗಳೇ ನಾಪತ್ತೆಯಾಗುವ ಸ್ಥಿತಿ ಒದಗಿದೆ ಎಂದು ದೂರಿದೆ.

ಮತ್ತೊಂದು ಟ್ವೀಟ್‌ನಲ್ಲಿ, ಸಿಎಂ ಕಾರ್ಯದರ್ಶಿಯ ಹನಿಟ್ರ್ಯಾಪ್ ಪ್ರಕರಣವನ್ನು ಬಿಜೆಪಿ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದರ ಹಿಂದೆ ಅತಿ ದೊಡ್ಡ ಹಗರಣ ಇರುವುದು ನಿಶ್ಚಿತ. ಬಸವರಾಜ ಬೊಮ್ಮಾಯಿ ಅವರೇ, ಹನಿಟ್ರಾಪ್‌ನಿಂದಾಗಿ ಇನ್ನೂ ಯಾವ ಅನಾಹುತಗಳು ಜರುಗಿವೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಎಂ ಕಚೇರಿಯಲ್ಲಿ ಮಹತ್ವದ ಕಡತಗಳು ನಾಪತ್ತೆಯಾಗಿರುವುದಕ್ಕೆ ಯಾವ ಕಾರಣ ಹುಡುಕುತ್ತಿದ್ದೀರಿ ಬಸವರಾಜ ಬೊಮ್ಮಾಯಿ ಅವರೇ, ಇಲಿ ಕಚ್ಚಿಕೊಂಡು ಹೋಯಿತೇ? ಹೆಗ್ಗಣ ಹೊತ್ತುಕೊಂಡು ಹೋಯಿತೇ? ಗಾಳಿಯಲ್ಲಿ ಹಾರಿ ಹೋಯಿತೇ? ಉತ್ತರ ಪ್ರದೇಶದಲ್ಲಿ 500 ಕೆಜಿ ಗಾಂಜಾವನ್ನು ಇಲಿಗಳು ತಿಂದವಂತೆ! ನಿಮ್ಮದು 'ಯುಪಿ ಮಾಡೆಲ್' ಅಲ್ಲವೇ,  ನೀವೂ ಅದೇ ಕಾರಣ ಕೊಡುವಿರಾ? ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!