ರಾಜ್ಯ

ಮಹಾರಾಷ್ಟ್ರ ಸರ್ಕಾರದ ವಿರುದ್ಧ 'ಜಾತ್ ಚಲೋ' ರ‍್ಯಾಲಿಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು

Ramyashree GN

ಬೆಂಗಳೂರು: ಗಡಿ ಭಾಗದಲ್ಲಿ ಅದರಲ್ಲೂ ಮಹಾರಾಷ್ಟ್ರದ ವ್ಯಾಪ್ತಿಗೆ ಬರುವ ಜಾತ್ ಮತ್ತು ಅಕ್ಕಲಕೋಟದಲ್ಲಿ ಕನ್ನಡ ಮಾತನಾಡುವ ಜನರಿಗೆ ಮೂಲ ಸೌಕರ್ಯಗಳನ್ನು ನಿರಾಕರಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ದ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಈ ಪ್ರದೇಶವನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಸಂಘಟನೆಗಳು 'ಜಾತ್ ಚಲೋ' ರ‍್ಯಾಲಿ ನಡೆಸಲು ತೀರ್ಮಾನಿಸಿವೆ.

ಇತ್ತೀಚೆಗೆ, ಮಹಾರಾಷ್ಟ್ರದ ಕಾರ್ಯಕರ್ತರು ಕರ್ನಾಟಕದ ಬೆಳಗಾವಿ ಹಕ್ಕು ವಿರೋಧಿಸಲು ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಪ್ಪು ಬಣ್ಣದಲ್ಲಿ ‘ಜೈ ಮಹಾರಾಷ್ಟ್ರ’ ಎಂದು ಬರೆದಿದ್ದರು. ಕೆಲವು ಕಲ್ಲು ತೂರಾಟದ ಘಟನೆಗಳು ವರದಿಯಾದ ನಂತರ ಕೆಎಸ್‌ಆರ್‌ಟಿಸಿಯಿಂದ ಬೆಳಗಾವಿ ಮಾರ್ಗದ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮಾತನಾಡಿ, ‘ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರತಿ ಬಾರಿ ವಿಧಾನಮಂಡಲ ಅಧಿವೇಶನ ನಡೆಸಲು ಉದ್ದೇಶಿಸಲಾಗುತ್ತಿದ್ದು, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್), ಶಿವಸೇನೆ ಮತ್ತಿತರ ಸಂಘಟನೆಗಳ ಕಾರ್ಯಕರ್ತರು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

'ಕಳೆದ ಬಾರಿಯೂ ಕರ್ನಾಟಕದ ವಾಹನಗಳು ಮತ್ತು ಕನ್ನಡಿಗರ ಆಸ್ತಿಯನ್ನು ಗುರಿಯಾಗಿಸಿಕೊಂಡಿದ್ದರು. ಜಾತ್, ಅಕ್ಕಲಕೋಟ ಮತ್ತಿತರ ಕಡೆಗಳಲ್ಲಿ ಕನ್ನಡ ಮಾತನಾಡುವ ಜನರಿಗೆ ಮೂಲ ಸೌಕರ್ಯಗಳನ್ನು ನಿರಾಕರಿಸಿ ಕಿರುಕುಳ ನೀಡಲಾಗುತ್ತಿದೆ. ಈ ಸ್ಥಳಗಳನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ ವಿಧಾನಸಭೆ ಅಧಿವೇಶನಕ್ಕೆ ಮುಂಚಿತವಾಗಿ ‘ಜಾತ್ ಚಲೋ’ ಮೆರವಣಿಗೆಯನ್ನು ಆಯೋಜಿಸುತ್ತಿದ್ದೇವೆ. ಕರ್ನಾಟಕ ಸರ್ಕಾರಕ್ಕೆ ಜ್ಞಾಪಕ ಪತ್ರ ಸಲ್ಲಿಸಲಾಗುವುದು' ಎಂದು ಶೆಟ್ಟಿ ತಿಳಿಸಿದರು.

SCROLL FOR NEXT