ರೌಡಿ ಶೀಟರ್ ಸೈಲೆಂಟ್ ಸುನೀಲ್ 
ರಾಜ್ಯ

ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ

ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. 

ಬೆಂಗಳೂರು: ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಿದಂತಾಗಿದ್ದು, ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.

 ಬಿಜೆಪಿಯ ಕೃಪಾಕಟಾಕ್ಷದಿಂದ  ಸೈಲೆಂಟ್ ಸುನಿಲ್ ಎಂಬ ರೌಡಿ ಮುಂದೆ ಈಗ ಪೂಲೀಸರೇ ಸೈಲೆಂಟ್ ಆಗಿದ್ದಾರೆ.  ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಪ್ರಶ್ನಿಸಿದೆ.

ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಎಂದು ಗೃಹ ಸಚಿವರನ್ನು ಪ್ರಶ್ನಿಸಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಸೈಲೆಂಟ್ ಸುನೀಲ , ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಕೇಳಿದೆ. 

ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು - ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT