ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕಲಿಗ ಹೋರಾಟ ಸಮಿತಿ ಸದಸ್ಯರು 
ರಾಜ್ಯ

ಒಕ್ಕಲಿಗರ ಮೀಸಲಾತಿ ಬೇಡಿಕೆ ಈಡೇರಿಕೆಗಾಗಿ ನಾವು ಬೀದಿಗಿಳಿಯಲು ಸಿದ್ಧ; ಇದು ದಾನವಲ್ಲ ನಮ್ಮ ಕಾನೂನುಬದ್ಧ ಹಕ್ಕು: ಡಿವಿಎಸ್

ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪಟ್ಟು ಹಿಡಿದಿದೆ

ಬೆಂಗಳೂರು: ‘ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪಟ್ಟು ಹಿಡಿದಿದೆ. ಗಡುವಿನೊಳಗೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ತೀವ್ರಗೊಳಿಸುವ ಬೆದರಿಕೆಯನ್ನೂ ಒಡ್ಡಿದೆ.

ಒಕ್ಕಲಿಗರ ಸಂಘದ ಆವರಣ ದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಒಕ್ಕಲಿಗ ನಾಯಕರು ಒಕ್ಕೊರಲಿನಿಂದ ಈ ಬೇಡಿಕೆ ಇಟ್ಟಿದ್ದಾರೆ.

‘ನಮ್ಮ ಸಮುದಾಯದ ಜನಸಂಖ್ಯೆಯ ಗಣತಿ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ್ದ ವರದಿಯಲ್ಲಿ ನಮ್ಮ ಜನಸಂಖ್ಯೆಯನ್ನು ತಿರುಚಲಾಗಿದೆ. ಒಕ್ಕಲಿಗರಿಗೆ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಶೇ 12ರಷ್ಟು ಮೀಸಲಾತಿ ಹೆಚ್ಚಿಸಬೇಕು. ಇದು ಭಿಕ್ಷೆ ಅಲ್ಲ. ನ್ಯಾಯಯುತ ಹಕ್ಕು. ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರಸರ್ಕಾರ ಘೋಷಿಸಿರುವ ಶೇ 10 ಮೀಸಲಾತಿ ನಮ್ಮ ಸಮುದಾಯಕ್ಕೆ ಸಿಗದೇ ಅನ್ಯಾಯ ಆಗಿದೆ ಎಂದರು.

ನಮ್ಮ ಬೇಡಿಕೆ ಈಡೇರಿಕೆಗಾಗಿ ನಾವು ಬೀದಿಗಿಳಿಯಲು ಸಿದ್ಧರಿದ್ದೇವೆ ಎಂದು ಹೇಳಿದ ಸದಾನಂದಗೌಡ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಇತ್ತೀಚೆಗೆ ನಿರ್ಧಾರ ಕೈಗೊಂಡಿತ್ತು. ನಮ್ಮ ಬೇಡಿಕೆ ದಾನವಲ್ಲ ಆದರೆ ನಮ್ಮ ಕಾನೂನುಬದ್ಧ ಹಕ್ಕು" ಎಂದು ಗೌಡ ಪ್ರತಿಪಾದಿಸಿದರು.

ನಾನು ಆಡಳಿತ ಪಕ್ಷದವನಾಗಿದ್ದು, ಸಾರ್ವಜನಿಕವಾಗಿ ಎಲ್ಲವನ್ನು ಹೇಳದಂತೆ ತಡೆಯುತ್ತಿದೆ. ಆದರೆ ನಾನು ಈ ವಿಷಯವನ್ನು ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡುತ್ತೇನೆ. 2012ರಲ್ಲಿ ನಾನು ಸಿಎಂ ಆಗಿದ್ದಾಗ ನಿರ್ಮಲಾನಂದನಾಥ ಸ್ವಾಮೀಜಿ ಒಕ್ಕಲಿಗ ಸಮುದಾಯದವರೊಬ್ಬರು ಸಿಎಂ ಸ್ಥಾನದಿಂದ ಕೆಳಗಿಳಿಯದಂತೆ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.

 ಡಿಸೆಂಬರ್ 9 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ದೇವೇಗೌಡರ ನೇತೃತ್ವದಲ್ಲಿ, ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ’ ಎಂದು ಸಂಸದ ಡಿ.ವಿ. ಸದಾನಂದಗೌಡ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT