ಸಾಂದರ್ಭಿಕ ಚಿತ್ರ 
ರಾಜ್ಯ

ರ‍್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ನಗರದ ಬಳಿ ಗುರುವಾರ ಈ ಘಟನೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಗುಂಪು ಸಾಮೂಹಿಕ ಅತ್ಯಾಚಾರವೆಸಗಿದೆ. ರ‍್ಯಾಪಿಡೊ ಬೈಕ್ ಪಿಕಪ್ ಮಾಡೋ ಸವಾರ ಹಾಗೂ ಆತನ ಸ್ನೇಹಿತನಿಂದ ಅತ್ಯಾಚಾರ ನಡೆದಿದ್ದು, ಸದ್ಯ ಯುವತಿ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅರಾಫತ್ ಮತ್ತು ಶಹಬುದ್ದೀನ್ ಎಂದು ಗುರುತಿಸಲಾಗಿದೆ.

ಬಿಟಿಎಂ ಲೇಔಟ್‍ (BTM Layout) ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಸಂತ್ರಸ್ಥ ಯುವತಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿದ ಬಳಿಕ ಗುರುವಾರ ರಾತ್ರಿ ರ‍್ಯಾಪಿಡೊ ಬೈಕ್ (Rapido Bike) ಬುಕ್ ಮಾಡಿದ್ದಳು. ಬಿಟಿಎಂ ಲೇಔಟ್‍ನಿಂದ ನೀಲಾದ್ರಿ ನಗರಕ್ಕೆ ರ‍್ಯಾಪಿಡೊ ಬೈಕ್ ಬುಕ್ಕಿಂಗ್ ಮಾಡಿದ್ದಳು. ಬೈಕ್ ಹುಡುಗ ಪಿಕಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ನೀಲಾದ್ರಿ ನಗರ ತಲುಪುವ ಹೊತ್ತಿಗೆ ಆಕೆ ಅರೆ ಪ್ರಜ್ಞಾವಸ್ಥೆಗೆ ತಲುಪಿದ್ದಳು.

ಹೀಗಾಗಿ ಇದರ ದುರ್ಲಾಭ ಪಡೆಯಲು ಮುಂದಾದ ರ್ಯಾಪಿಡೋ ಚಾಲಕ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ರ‍್ಯಾಪಿಡೊ ಯುವಕ ಡ್ರಾಪ್ ಪಾಯಿಂಟ್‍ನಲ್ಲಿ ಬಿಡಲಿಲ್ಲ. ಅಲ್ಲದೆ ಇದೇ ಸಂದರ್ಭದಲ್ಲಿ ಆತ ತನ್ನ ಸ್ನೇಹಿತನನ್ನು ಕೂಡ ಸ್ಥಳಕ್ಕೆ ಕರೆಸಿಕೊಳ್ಳುತ್ತಾನೆ. ನಂತರ ಇಬ್ಬರು ನೀಲಾದ್ರಿ ನಗರದ ತನ್ನ ರೂಮ್‍ಗೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಪ್ರಜ್ಞೆ ಬಂದ ಬಳಿಕ ಯುವತಿಯನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದಾರೆ.

ಘಟನೆ ಬಳಿಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಯುವತಿ ದೂರು ಕೊಟ್ಟಿದ್ದು, ಸದ್ಯ ದೂರು ಆಧರಿಸಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT