ಪ್ರಾತಿನಿಧಿಕ ಚಿತ್ರ 
ರಾಜ್ಯ

ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಆರೋಪಿಯನ್ನು ಅಬೂಬ್ಬಕ್ಕರ್ ಸಿದ್ಧಿಕ್ ಎಂದು ಗುರುತಿಸಲಾಗಿದ್ದು, ಗ್ರಾಮಸ್ಥರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ರಾಮದ ಸಿ.ಎ. ದೇವಯ್ಯ ಎಂಬುವವರು ಹಸುವನ್ನು ಮೇಯಲು ಬಿಟ್ಟು ಸಂತೆಗೆ ಹೋಗಿದ್ದರು. ಸಂತೆಯಿಂದ ವಾಪಸ್ ಬಂದಾಗ ತಮ್ಮ ಹೊಲದ ದಾರಿಯಲ್ಲಿ ಬೈಕ್ ನಿಂತಿರುವುದನ್ನು ಕಂಡಿದ್ದಾರೆ. ಬಳಿಕ ಮೇಯಲು ಕಟ್ಟಿದ್ದ ಹಸುವನ್ನು ಮನೆಗೆ ಕರೆದುಕೊಂಡು ಬರಲು ಹೊಲದ ಬಳಿ ತೆರಳಿದ್ದಾರೆ.

ಈ ವೇಳೆ ಅಪರಚಿತ ವ್ಯಕ್ತಿಯೊಬ್ಬ ತಮ್ಮ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದನ್ನು ಕಂಡಿದ್ದಾರೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದಿದ್ದಾರೆ. ವಿಚಾರಣೆ ನಡೆಸಿದಾಗ ಆತ ಸುಂಟಿಕೊಪ್ಪ ಪಂಪ್ ಹೌಸ್ ನಿವಾಸಿ ಎಂದು ತಿಳಿದುಬಂದಿದೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಭಾರತೀಯ ದಂಡ ಸಂಹಿತೆಯ ಕಲಂ 377ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭಿಸಿದ ಹಜಾರೆ, Video!

ಮೋದಿ ಪ್ರತಿಕ್ರಿಯೆಗೆ ಕಾಕ್ರೋಚ್ ಕೆಂಡಾಮಂಡಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ - CJP

ಜು. 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ವಾರ್ನಿಂಗ್ ಕೊಟ್ಟ ರಾಜ್ ಠಾಕ್ರೆ!

India vs Australia: ಆಸ್ಟ್ರೇಲಿಯಾ ತಂಡದಲ್ಲಿ ಭಾರತ ಮೂಲದ ಇಬ್ಬರಿಗೆ ಸ್ಥಾನ; ಟೀಂ ಇಂಡಿಯಾ ವಿರುದ್ಧವೇ ಕಣಕ್ಕೆ!