ಕೊಡಗು: ಹಸುವಿಯೊಂದಿಗೆ ಅಸಹಜ ಸೆಕ್ಸ್ ನಡೆಸಿದ್ದ ವ್ಯಕ್ತಿ ಬಂಧನ
ಕೊಡಗಿನ ಸುಂಟಿಕೊಪ್ಪದಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೊಡಗು: ಕೊಡಗಿನ ಸುಂಟಿಕೊಪ್ಪದಲ್ಲಿ ಹಸುವಿನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಯನ್ನು ಅಬೂಬಕ್ಕರ್ ಸಿದ್ದಿಕಿ(40) ಎಂದು ಗುರುತಿಸಲಾಗಿದ್ದು, ಕಳೆದ ಭಾನುವಾರ ಹೊಲದಲ್ಲಿ
ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಿ ಹಸುವಿನ ಮಾಲೀಕ ದೇವಯ್ಯ ಪೊಲೀಸರಿಗೆ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಬುಬಕ್ಕರ್ ನನ್ನು ಬಂಧಿಸಿದ್ದಾರೆ ಮತ್ತು ಹಸುವನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ.
ಸುಂಟಿಕೊಪ್ಪ ಸಂತೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದಾಗ ದಾರಿಯಲ್ಲಿ ಒಂದು ಕೆಂಪು ಬಣ್ಣದ ಕೆಎ -09-6223 ಹೀರೋ ಹೋಂಡಾ ಪ್ಯಾಷನ್ ಪ್ರೋ ಬೈಕ್ ನಿಂತಿದ್ದನ್ನು ಗಮನಿಸಿದ ದೇವಯ್ಯ, ಹೊಲದ ಬಳಿ ಹೋದಾಗ ಅಬೂಬಕ್ಕರ್ ಸಿದ್ದಿಕಿ ಹಸುವಿನೊಂದಿಗೆ ಸಂಭೋಗ ನಡೆಸುತ್ತಿದ್ದ ಎಂದು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.