ವಿಕ್ರಮ್ ಕಿರ್ಲೋಸ್ಕರ್(ಸಂಗ್ರಹ ಚಿತ್ರ) 
ರಾಜ್ಯ

ಟೊಯೊಟೊ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ: ಸಿಎಂ ಸಂತಾಪ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ ​(Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ನಿನ್ನೆ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. 

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ನ ​(Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (Vikram Kirloskar) ನಿನ್ನೆ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. 

ಅವರು ನಿನ್ನೆ ಬೆಳಗ್ಗೆ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಪ್ರಕಟಣೆ ಮೂಲಕ ದೃಢಪಡಿಸಿದೆ. 

ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ.ವಿಕ್ರಮ್ ಅವರು ಕಿರ್ಲೋಸ್ಕರ್ ಗ್ರೂಪ್‌ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್‌ನ ಉಪಾಧ್ಯಕ್ಷರೂ ಆಗಿದ್ದರು.

ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವೀಧರರಾದ ವಿಕ್ರಮ್ ಕಿರ್ಲೋಸ್ಕರ್ ಅವರು ಭಾರತೀಯ ಆಟೋ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು.

ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಉದ್ಯಮ ವಲಯದ ಗಣ್ಯರು, ಸಮಾಜದ ಹಲವು ಕ್ಷೇತ್ರಗಳ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.

ನವೆಂಬರ್ 25 ರಂದು ಮುಂಬೈನಲ್ಲಿ ನಡೆದ ಟೊಯೋಟಾ ಇನ್ನೋವಾ ಹೈಕ್ರಾಸ್ ಅನಾವರಣದಲ್ಲಿ ಕಿರ್ಲೋಸ್ಕರ್ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT