ರಾಜ್ಯ

ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 57 ಸೇರಿ ರಾಜ್ಯದಲ್ಲಿ 153 ಮಂದಿಗೆ ಪಾಸಿಟಿವ್; ಸಾವು ಶೂನ್ಯ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ153 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,64,979ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40242 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 57 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1872084ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 139 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4021860ಕ್ಕೆ ಏರಿಕೆಯಾಗಿದೆ. ಇನ್ನು 2835 ಸಕ್ರಿಯ ಪ್ರಕರಣಗಳಿವೆ.

SCROLL FOR NEXT