ತಾವರ್‌ಚಂದ್ ಗೆಹ್ಲೋಟ್‌ 
ರಾಜ್ಯ

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ರಾಜ್ಯಪಾಲ ಗೆಹ್ಲೋಟ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕಳೆದ ಶನಿವಾರ ಅಂದರೆ ಅಕ್ಟೋಬರ್ 1ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಮೂರು ದಿನಗಳ ಚಿಕಿತ್ಸೆ ಬಳಿಕ ಇದೀಗ ರಾಜ್ಯಪಾಲರು ಸೋಂಕಿನಿಂದ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಅಂತೆಯೇ ಮುಂಜಾಗ್ರತಾ ಕ್ರಮವಾಗಿ ಅವರನ್ನು ಅವರ ನಿವಾಸದಲ್ಲಿಯೇ ನುರಿತ ವೈದ್ಯರು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಗೆಹ್ಲೋಟ್ ಅವರು ಎಂದಿನಂತೆ ತಮ್ಮ ಅಧಿಕೃತ ಕಾರ್ಯಗಳಲ್ಲಿ ತೊಡಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel