ಸಂತ್ರಸ್ತ ಬಾಲಕ 
ರಾಜ್ಯ

ಕೊಪ್ಪಳದಲ್ಲಿ ಬೆತ್ತಲೆ ಪೂಜೆ: ಅಪ್ರಾಪ್ತ ಬಾಲಕನ ವಿಡಿಯೋ ಮಾಡಿದ ಕಿಡಿಗೇಡಿಗಳ ವಿರುದ್ಧ ಕೇಸ್ ದಾಖಲು

ತಮ್ಮ ಖುಷಿಗಾಗಿ ಮುಗ್ಧ ಬಾಲಕನನ್ನು ಬೆತ್ತಲೆ ಪೂಜೆ ಮಾಡುವಂತೆ ಪುಸಲಾಯಿಸಿ, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕೊಪ್ಪಳ: ತಮ್ಮ ಖುಷಿಗಾಗಿ ಮುಗ್ಧ ಬಾಲಕನನ್ನು ಬೆತ್ತಲೆ ಪೂಜೆ ಮಾಡುವಂತೆ ಪುಸಲಾಯಿಸಿ, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಬೆತ್ತಲೆ ಪೂಜೆ ಮಾಡಿದರೆ ಬಡತನ ನಿವಾರಣೆ ಆಗುತ್ತದೆ, ತಂದೆಯ ಸಾಲ ತೀರುತ್ತದೆ ಮತ್ತು ಹಣ ಕೈಸೇರುತ್ತದೆ ಎಂದು ನಂಬಿಸಿ ಹುಡುಗನಿಗೆ ಬೆತ್ತಲೆ ಪೂಜೆ ಮಾಡುವಂತೆ ಮಾಡಿದ್ದಾರೆ. ನಂತರ ಅದರ ವಿಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಯೂಟ್ಯೂಬ್‌ನಲ್ಲಿ ಹರಿ ಬಿಡಲಾಗಿದೆ. ಈ ಬಗ್ಗೆ ಬಾಲಕನ ಪೋಷಕರು ಕೊಪ್ಪಳದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಅಕ್ಟೋಬರ್ 2 ರಂದು ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇತ್ತೀಚೆಗಷ್ಟೆ 16 ವರ್ಷದ ಬಾಲಕನ ತಂದೆ ಕೊಪ್ಪಳದಲ್ಲಿ ಮನೆ ಕಟ್ಟಿಸಿದ್ದರು. ಮನೆ ಕಟ್ಟಿಸಲು ಸಾಲ ಮಾಡಿದ್ದರು. ಆ ಸಾಲವನ್ನು ತೀರಿಸುವ ಸಲುವಾಗಿ ಮಗ ಹುಬ್ಬಳ್ಳಿಗೆ ಬಂದು ಕೆಲಸ ಮಾಡುತ್ತಿದ್ದ. ದಿನಗೂಲಿ ನೌಕರನಾಗಿ ಸಾಧ್ಯವಾದಷ್ಟು ಸಂಪಾದಿಸಿ ಮನೆಯ ಸಾಲ ತೀರಿಸಲು ಶ್ರಮಿಸುತ್ತಿದ್ದ. ಬಾಲಕ ತನ್ನ ಕಷ್ಟವನ್ನು ಕೆಲವರ ಬಳಿ ಹೇಳಿಕೊಂಡಿದ್ದಾನೆ.

ಬೆತ್ತಲೆ ಪೂಜೆ ಮಾಡಿದ್ರೆ ಬಡತನ ನಿವಾರಣೆ ಆಗುತ್ತೆ ಅಂತ ಬಾಲಕನನ್ನು ಪುಸಲಾಯಿಸಿದ ಶರಣಪ್ಪ ಮತ್ತು ತಂಡ. ಬಳಿಕ ರೂಮ್ ನಲ್ಲಿ ಬಾಲಕ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಪೂಜೆ ಮಾಡುವ ನಾಟಕ ಮಾಡಲಾಗಿದೆ. ಪೂಜೆಯ ವಿಡಿಯೋ ಮಾಡಿ ಫೇಸ್ ಬುಕ್, ವಾಟ್ಸ್ ಆಪ್, ಯೂಟ್ಯೂಬ್ ಗಳಲ್ಲಿ ವಿಡಿಯೋ ವೈರಲ್ ಮಾಡಿದ ಶರಣಪ್ಪ‌ ಮತ್ತು ತಂಡ.  ಶರಣಪ್ಪ, ಇರುಪನಗೌಡ, ಶರಣಪ್ಪ ತಳವರ್ ವಿರುದ್ಧ ಬಾಲಕನ ಕುಟುಂಬ ದೂರು ದಾಖಲಿಸಿದೆ.

ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಕೊಪ್ಪಳ ಮೂಲದ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬಾಲಕನ ಹೇಳಿಕೆಯಂತೆ, ಆರೋಪಿಗಳೊಂದಿಗೆ ಜೂನ್‌ನಲ್ಲಿ ತಿಮ್ಮಸಾಗರ ಗ್ರಾಮದಲ್ಲಿ ಜಲ ಜೀವನ್ ಮಿಷನ್‌ನ ಪೈಪ್‌ಲೈನ್ ಹಾಕುವ ಕೆಲಸಕ್ಕೆ ಹುಬ್ಬಳ್ಳಿಗೆ ಬಂದಿದ್ದರು.

ಬಾಲಕ ಹಾಗೂ ಕೊಪ್ಪಳ ಜಿಲ್ಲೆಯ ಗ್ರಾಮ ತೊರೆದಿರುವ ಆರೋಪಿಗಳ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಜೂನ್ ತಿಂಗಳಿನಲ್ಲಿ ಹುಬ್ಬಳ್ಳಿಯಲ್ಲಿ ಬೆತ್ತಲೆ ಪೂಜೆ ನಡೆಸಲಾಗಿದೆ ಎಂದು ಬಾಲಕ ಹೇಳಿಕೆ ನೀಡಿದ್ದು, ತಂಡವೊಂದು ಹುಬ್ಬಳ್ಳಿಗೂ ಭೇಟಿ ನೀಡಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!