ಜಂಬೂ ಸವಾರಿ (ಸಂಗ್ರಹ ಚಿತ್ರ) 
ರಾಜ್ಯ

ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಡಗರ, ಜಂಬೂ ಸವಾರಿಗೆ ಭರದ ಸಿದ್ಧತೆ; ನಾಡಹಬ್ಬದ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.

ಮೆರವಣಿಗೆ ಸಾಗುವ ರಸ್ತೆ, ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಲಕ್ಷಾಂತರ ಜನರು ಸೇರಬಹುದೆಂಬ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಸಾಂಸ್ಕೃತಿಕ ನಗರ ಮೈಸೂರು ಅಲ್ಲದೆ, ಕೊಡಗು ಜಿಲ್ಲೆಯ ಮಡಿಕೇರಿ, ಕರಾವಳಿಯ ಮಂಗಳೂರು ಹಾಗೂ ಧಾರ್ಮಿಕ ಯಾತ್ರಾಸ್ಥಳ ಶೃಂಗೇರಿಯಲ್ಲೂ ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಜನರು ಸಜ್ಜಾಗಿದ್ದಾರೆ. ನಗರಗಳು ವಿದ್ಯುದ್ದೀಪಗಳಿಂದ ಕಂಗೊಳಿಸುತ್ತಿವೆ.

ಆಯುಧಪೂಜೆಗಾಗಿ ರಾಜಪರಿವಾರಕ್ಕೆ ಸೇರಿದವರು ಕೋಡಿ ಸೋಮೆಶ್ವರ ದೇಗುಲಕ್ಕೆ ಬಂದಿದ್ದು, ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.  ಮೈಸೂರು ಅರಮನೆಯಲ್ಲಿ ಆಯುಧಪೂಜೆಯ ಪೂಜಾ ಕೈಂಕರ್ಯ ಆರಂಭವಾಗಿದ್ದು, ಆನೆಬಾಗಿಲು ಮೂಲಕ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ.

ಪಾರಂಪರಿಕ ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲಿ ತರಲಾಯಿತು. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳನ್ನು ಅಲಂಕರಿಸಿದ ರಾಜಪುರೋಹಿತರು ವಿಶೇಷ ಪೂಜೆ ನೆರವೇರಿಸಲಾಯಿತು.

ಅರಮನೆ ನಗರಿಯಲ್ಲಿ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ಚಂಡಿ ಹೋಮದ ವಿಧಿಗಳು ಆರಂಭವಾಗಿದ್ದು, 9 ಗಂಟೆಗೆ ಚಂಡಿಹೋಮ ಪೂರ್ಣಾಹುತಿ ನಡೆಯಿತು. 11.02ರಿಂದ 11.25ರ ಶುಭ ಮುಹೂರ್ತದಲ್ಲಿ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವುದು.

ಇಂದು ರಾತ್ರಿ ಈ ವರ್ಷದ ಖಾಸಗಿ ದರ್ಬಾರ್​ನ ಕೊನೆಯ ದಿನ. ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯು ಅ.5ರಂದು ನಡೆಯಲಿದೆ. 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ, ಅಧಿದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ನಮಿಸಲು, ಮೆರವಣಿಗೆ ವೈಭವ ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ಈ ಬಾರಿ ದೀಪಾಲಂಕಾರದ ನಡುವೆ ಮೆರವಣಿಗೆ ಸಾಗುವುದು ವಿಶೇಷ.

ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.36ರಿಂದ 2.50ರೊಳಗೆ ನಂದಿಧ್ವಜ ಪೂಜೆ ನಡೆಯಲಿದೆ. ಸಂಜೆ 5.07ರಿಂದ 5.18ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿ ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT