ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 76 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,299ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರು ಮೃತಪಟ್ಟಿಲ್ಲ. ಇನ್ನು ರಾಜ್ಯದಲ್ಲಿ ಇಲ್ಲಿಯವರೆಗೂ 40,244 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 53 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,204ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಇದನ್ನು ಓದಿ: ಕೋವಿಡ್ -19: ಕಳೆದ 24 ಗಂಟೆಗಳಲ್ಲಿ 2,468 ಹೊಸ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 33,318ಕ್ಕೆ ಕುಸಿತ
ರಾಜ್ಯದಲ್ಲಿ ಇಂದು 43 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,22,243ಕ್ಕೆ ಏರಿಕೆಯಾಗಿದೆ. ಇನ್ನು 2,770 ಸಕ್ರಿಯ ಪ್ರಕರಣಗಳಿವೆ.