ರಾಜ್ಯ

ಮೈಸೂರು ದಸರಾ 2022: ಜಂಬೂ ಸವಾರಿಗೆ ಕ್ಷಣಗಣನೆ, ಚಾಮುಂಡಿ ಉತ್ಸವ ಮೂರ್ತಿಗೆ ಸಿಎಂ ಬೊಮ್ಮಾಯಿ ಪೂಜೆ

Nagaraja AB

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತಿತರರು ಈ ಉಪಸ್ಥಿತರಿದ್ದರು. ನಂತರ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯೊಂದಿಗೆ ಅರಮನೆಗೆ ತರಲಾಯಿತು.

ಕಳೆದೆರಡು ವರ್ಷಗಳಿಂದ ಸರಳವಾಗಿ ಆಚರಿಸಲಾಗಿದ್ದ ದಸರಾ ಮಹೋತ್ಸವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಜಂಬೂ ಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ವಿವಿಧ ಕಡೆಗಳಿಂದ ಜನಸಾಗರವೇ ಮೈಸೂರಿಗೆ ಆಗಮಿಸುತ್ತಿದೆ. ಮಧ್ಯಾಹ್ನ 2.36ರಿಂದ 2.50ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಸಿಎಂ ಚಾಲನೆ ನೀಡಲಿದ್ದಾರೆ.

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಟಾರ್ಚನೆ ಮಾಡಲಿದ್ದಾರೆ. ರಾಜ ವಂಶಸ್ಥ ಯದುವೀರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ಸಾಥ್ ನೀಡಲಿದ್ದಾರೆ. ಸಂಜೆ ಹೊತ್ತಿಗೆ ಚಿನ್ನದ ಅಂಬಾರಿ ಅರಮನೆ ಅಂಗಳದಿಂದ ಬನ್ನಿಮಂಟಪದತ್ತ ಪಯಣಿಸಲಿದ್ದು, ವಿದ್ಯುತ್ ದೀಪಾಲಂಕಾರದಲ್ಲಿ ಚಿನ್ನದ ಅಂಬಾರಿ ಸಾಗಲಿದೆ.

SCROLL FOR NEXT