ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 75 ಸೇರಿ ರಾಜ್ಯದಲ್ಲಿ 111 ಮಂದಿಗೆ ಕೊರೋನಾ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,410ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,410ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರು ಮೃತಪಟ್ಟಿಲ್ಲ. ಇನ್ನು ರಾಜ್ಯದಲ್ಲಿ ಇಲ್ಲಿಯವರೆಗೂ 40,244 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 75 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,279ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 131 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,22,374ಕ್ಕೆ ಏರಿಕೆಯಾಗಿದೆ. ಇನ್ನು 2,750 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ