ಸಿಎಂ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಿರುವುದು 
ರಾಜ್ಯ

ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಪ್ರತಿನಿಧಿಗಳ ಮೇಲೆ ಪೊಲೀಸರ ಹಲ್ಲೆ ಆರೋಪ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಸಿಬ್ಬಂದಿ ಮೇಲೆ ಪೊಲೀಸರು ದುರ್ವರ್ತನೆ ತೋರಿದ್ದು ಇದನ್ನು ನೋಡಿದರೂ ನೋಡಿದಂತೆ ಮಂಡ್ಯ ಜಿಲ್ಲೆ ಎಸ್‌ಪಿ ಎನ್.ಯತೀಶ್‌ ಮೊಂಡುತನ ಪ್ರದರ್ಶನ ಮಾಡಿರುವುದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

ಮಂಡ್ಯ: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಸಿಬ್ಬಂದಿ ಮೇಲೆ ಪೊಲೀಸರು ದುರ್ವರ್ತನೆ ತೋರಿದ್ದು ಇದನ್ನು ನೋಡಿದರೂ ನೋಡಿದಂತೆ ಮಂಡ್ಯ ಜಿಲ್ಲೆ ಎಸ್‌ಪಿ ಎನ್.ಯತೀಶ್‌ ಮೊಂಡುತನ ಪ್ರದರ್ಶನ ಮಾಡಿರುವುದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

ಪಾದಯಾತ್ರೆ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ಭದ್ರತೆ ಒಧಗಿಸುವ ಸಂದರ್ಭದಲ್ಲಿ ಈ ಹಲ್ಲೆ ನಡೆದಿದೆ. ಪಾದಯಾತ್ರೆಯ ವೇಳೆ ಜನರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸುವ ಬದಲು ಪೊಲೀಸರು ಮಾಧ್ಯಮದವರ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮಂಡ್ಯ ಜಿಲ್ಲೆ ಪಾಂಡವಪುರದ ಜಕ್ಕನಹಳ್ಳಿ ಕ್ರಾಸ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಮಾಧ್ಯಮ ಸಿಬ್ಬಂದಿ ಮೇಲೆ ದುರ್ವರ್ತನೆ ತೋರಿದ್ದಾರೆ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದು ಮಂಡ್ಯ SP ಯತೀಶ್‌ ನಡೆಗೆ ಮಾಧ್ಯಮ ಪ್ರತಿನಿಧಿಗಳು ಗರಂ ಆಗಿದ್ದಾರೆ.

ಸಿಎಂ ಬೊಮ್ಮಾಯಿ ಹೇಳಿದ್ದೇನು? ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ತರಿಸಿಕೊಂಡು ಯಾರ ತಪ್ಪಿದೆ ಎಂದು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!