ಹಂಪಿಯಲ್ಲಿ ನಿರ್ಬಂಧಿತ ಪ್ರದೇಶದಲ್ಲಿ ಬೃಹತ್ ವಾಹನಗಳ ಸಂಚಾರ 
ರಾಜ್ಯ

ಹಂಪಿ: ಯುನೆಸ್ಕೋ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳಿಂದ ನಿಯಮಗಳ ಉಲ್ಲಂಘನೆ!

ಹಂಪಿಯಲ್ಲಿ ಯುನೆಸ್ಕೋ ಸಂರಕ್ಷಿತ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಬೃಹತ್ ವಾಹನಗಳಲ್ಲಿ ಸಂಚರಿಸುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ.

ಹೊಸಪೇಟೆ: ಹಂಪಿಯಲ್ಲಿ ಯುನೆಸ್ಕೋ ಸಂರಕ್ಷಿತ ತಾಣಗಳಲ್ಲಿ ಸರ್ಕಾರಿ ಅಧಿಕಾರಿಗಳೇ ಬೃಹತ್ ವಾಹನಗಳಲ್ಲಿ ಸಂಚರಿಸುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ.

ಹಂಪಿಯ ವಿಜಯ ವಿಠಲ ದೇವಾಲಯ ಸೇರಿದಂತೆ ಹಲವು ಪ್ರದೇಶಗಳನ್ನು ನಾನ್-ವೈಬ್ರೇಷನ್ ಜೋನ್ ಎಂದು ಘೋಷಿಸಲಾಗಿದ್ದು ನಿಯಮಗಳ ಪ್ರಕಾರ ದೇವಾಲಯದ ಆವರಣಗಳಲ್ಲಿ ಅಡ್ಡಾಡುವುದಕ್ಕೆ ಕೇವಲ ಬ್ಯಾಟರಿ ಚಾಲಿತ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಎಲೆಕ್ಟ್ರಿಕ್ ವಾಹನಗಳನ್ನು ಬಳಸಿದರೆ, ಕೆಲವು ಸರ್ಕಾರಿ ಅಧಿಕಾರಿಗಳು ಹಾಗು ಅವರ ಸಂಬಂಧಿಕರು ಸಂರಕ್ಷಿತ ಪ್ರದೇಶಗಳಲ್ಲಿ ಬೃಹತ್ ವಾಹನಗಳನ್ನು ಬಳಸುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪುರಾತನ, ಪ್ರಾಚೀನ ಸ್ಮಾರಕಗಳಿಗೆ ಹಾನಿಯಾಗುವುದನ್ನು ತಡೆಗಟ್ಟಲು ಹಂಪಿಯ ಕೆಲವು ಪ್ರದೇಶಗಳನ್ನು ನಾನ್ ವೈಬ್ರೇಷನ್ ಜೋನ್ ಎಂದು ಗುರುತಿಸಲಾಗಿತ್ತು. ಈ ಪೈಕಿ ವಿಜಯ ವಿಠಲ ದೇವಾಲಯವೊಂದಾಗಿದೆ. ಹಂಪನಿಯ ಸ್ಥಳೀಯ ನಿವಾಸಿ ಮಂಜುನಾಥ್ ಪಿ ನಿಯಮ ಉಲ್ಲಂಘನೆಯ ಬಗ್ಗೆ ಮಾತನಾಡಿದ್ದು, "ಈ ಪ್ರದೇಶ ಯುನೆಸ್ಕೋ ನಿಂದ ಜಾಗತಿಕ ಪಾರಂಪರಿಕ ತಾಣ ಎಂದು ಗುರುತಿಸಲಾಗಿದೆ ಹಾಗೂ ಎಎಸ್ಐ ನಿಂದ ಸಂರಕ್ಷಿತ ಪ್ರದೇಶವಾಗಿದೆ. ಆದರೆ ಸರ್ಕಾರಿ ಅಧಿಕಾರಿಗಳೇ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ".

"ಗೆಜ್ಜಾಲ್ ಮಂಟಪ ದಿಂದ ವಿಜಯ ವಿಠಲ ದೇವಾಲಯವರೆಗೂ ಬೃಹತ್ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಳೆದ ವರ್ಷ ಹಂಪಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ನೀಡಿದ್ದಾಗಲೂ ಅವರು ಎಲೆಕ್ಟ್ರಿಕ್ ವಾಹನಗಳನ್ನು ಬಳಸಿದ್ದರು, ನಿರ್ಬಂಧಿತ ವಲಯದಲ್ಲಿ ಯಾವುದೇ ವಾಹನಗಳ ಪ್ರವೇಶಕ್ಕೆ ಅವಕಾಶ ನೀಡಬಾರದು" ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

ಈ ಬಾರಿಯ 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB, ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board

ಹೊಲದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಕ್ರಿಯೆ: ಗದರಿದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಂದ ಯುವಕ!