ರಾಜ್ಯ

ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ, ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- ಮುಖ್ಯಮಂತ್ರಿ ಬೊಮ್ಮಾಯಿ

Nagaraja AB

ಬೆಂಗಳೂರು: ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ  ಆತ್ಮಗೌರವ ,  ಆತ್ಮಸನ್ಮಾನ , ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ  ಬದ್ಧವಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಸರ್ಕಾರ, ಸಮಾಜ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಲು ಅಗತ್ಯವಿರುವ ಕಾರ್ಯಕ್ರಮಗಳನ್ನು  ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ವಿಶ್ವದ ಹತ್ತು ಶ್ರೇಷ್ಠ ಗ್ರಂಥಗಳಲ್ಲಿ ಒಂದಾಗಿದೆ.  ರಾಮಾಯಣ ರಚಿಸಿ ಜೀವನದ ಮಾರ್ಗ ಮತ್ತು ಸಾರವನ್ನು ವಾಲ್ಮೀಕಿ ಕೊಟ್ಟಿದ್ದಾರೆ. ರಾಮಾಯಣದ ಎಲ್ಲಾ ಪ್ರಸಂಗಗಳು ಅನುಕರಣೀಯ. ಮುಖ್ಯಮಂತ್ರಿಯಾಗಿ ಮಹರ್ಷಿ ವಾಲ್ಮೀಕಿಯವರ ತತ್ವ, ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬಿ‌. ಶ್ರೀರಾಮುಲು, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಭೋವಿ ಪೀಠದ  ಸಿದ್ದರಾಮೇಶ್ವರ ಸ್ವಾಮೀಜಿ ಮತ್ತಿತರರು ಹಾಜರಿದ್ದರು.

SCROLL FOR NEXT