ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 63 ಸೇರಿ ರಾಜ್ಯದಲ್ಲಿ 109 ಮಂದಿಗೆ ಪಾಸಿಟಿವ್; ಒಬ್ಬರು ಸಾವು

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 109 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,800ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,246ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 63 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,72,466ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 79 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,22,821ಕ್ಕೆ ಏರಿಕೆಯಾಗಿದೆ. ಇನ್ನು 2,691 ಸಕ್ರಿಯ ಪ್ರಕರಣಗಳಿವೆ.

SCROLL FOR NEXT