ವಿದ್ಯುತ್ ದೀಪಲಂಕಾರ 
ರಾಜ್ಯ

ಮೈಸೂರು: ‘ದಸರಾ ವಿದ್ಯುತ್ ದೀಪಾಲಂಕಾರ’ ಎರಡು ದಿನ ಮುಂದುವರಿಕೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಲಂಕಾರವನ್ನು ಅಕ್ಟೋಬರ್ 12 ರವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಲಂಕಾರವನ್ನು ಅಕ್ಟೋಬರ್ 12 ರವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಸೆಸ್ಕ್ ನಿರ್ದೇಶಕ ಜಯವಿಭವಸ್ವಾಮಿ ಹಾಗೂ ದಸರಾ ವಿದ್ಯುತ್ ದೀಪಾಲಂಕಾರ  ಉಪ ಸಮಿತಿ ಅಧ್ಯಕ್ಷ ಟಿ. ರಮೇಶ್ ಅವರು ಸೋಮವಾರ ತಿಳಿಸಿದ್ದಾರೆ. 

ಅಕ್ಟೋಬರ್ 12 ರವರೆಗೆ ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಮುಂದುವರೆಯಲಿದೆ. ದಸರಾ ಹಿನ್ನೆಲೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪ, ಬಣ್ಣ ಬಣ್ಣದ ಲೈಂಟಿಗ್ಸ್ ಹಾಕಲಾಗಿತ್ತು. ಇದರಿಂದ ಮೈಸೂರು ನಗರ ಝಗಮಗಿಸುತ್ತಿತ್ತು. ಲಕ್ಷಾಂತರ ಮಂದಿ ಪ್ರವಾಸಿಗರು ಇದನ್ನು ಕಣ್ತುಂಬಿಕೊಂಡಿದ್ದರು. 

ಇದೀಗ  ಎರಡು ದಿನ ದಸರಾ ವಿದ್ಯುತ್ ದೀಪಾಲಂಕಾರ ವಿಸ್ತರಣೆ ಮಾಡಲಾಗಿದ್ದು, ಈ ಮೂಲಕ ಪ್ರವಾಸಿಗರು, ಮೈಸೂರಿನ ಜನತೆ ಇನ್ನೂ ಎರಡು ದಿನ ಮೈಸೂರು ವಿದ್ಯುತ್ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ದಸರಾ ದೀಪಾಲಂಕಾರವನ್ನು ಮುಂದುವರಿಸುವಂತೆ ಬೇಡಿಕೆ ಬಂದಿರುವುದರಿಂದ ಸೆಸ್ಕ್ ಸ್ಪಂದಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ನಿರ್ದೇಶನದಂತೆ ಮತ್ತೆ ಎರಡು ದಿನ ಮುಂದುವರೆಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video