ಆರಗ ಜ್ಞಾನೇಂದ್ರ 
ರಾಜ್ಯ

ಪಂಚಾಯತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳಿಂದ ತಿರಸ್ಕಾರ: ಆರಗ ಜ್ಞಾನೇಂದ್ರ

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದಿದ್ದು, ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮ ಗಳಿಗೆ ತಿದ್ದುಪಡಿಗೆ ಯಾವುದೇ ತರುವ ಪ್ರಸ್ತಾವನೆಯನ್ನು ತಿರಸ್ಕರಿಸಿರುವುದಾಗಿ ಆರಗ ಜ್ಞಾನೇಂದ್ರ ಹೇಳಿದ್ದಾರೆ. 

ಗ್ರಾಮ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ, ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ, ಸಲ್ಲಿಸುತ್ತಿದೆ. ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು, ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿ ಸುವ ವರದಿಗಳನ್ನು ತಿರಸ್ಕರಿಸುವ ಮೂಲಕ  ಮುಖ್ಯಮಂತ್ರಿಗಳು, ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ