ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನ್ಯಾ. ಪಿ ಬಿ ವರಾಲೆ
Srinivasa Murthy VN
Updated On : 11 Oct 2022, 1:56 pm

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಪಿ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕೇಂದ್ರ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜುಜು ಅವರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಅದೇ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ (ಪ್ರಸನ್ನ ಬಿ.ವರಾಳೆ) ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement

Advertisement

ಇದನ್ನೂ ಓದಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿವೈ ಚಂದ್ರಚೂಡ್​ ಹೆಸರು ಶಿಫಾರಸು ಮಾಡಿದ CJI ಯುಯು ಲಲಿತ್

 'ಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ.ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ' ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ವ್ಯಕ್ತಿಚಿತ್ರ

ಸುಪ್ರೀಂ ಕೋರ್ಟ್‌ ಕೊಲಿಜಿಯಂ ಕಳೆದ ತಿಂಗಳ ಕೊನೆಯಲ್ಲಿ ಈ ಶಿಫಾರಸುಗಳನ್ನು ಮಾಡಿತ್ತು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement